ಮಡಿಕೇರಿ : ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Madikeri) ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿಯ ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.