ನಿಧನ ವಾರ್ತೆ
Nethravathi River | ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಮೃತದೇಹ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ

ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ (Nethravathi River) ಹಿಂದೂ ಸಂಘಟನೆಯ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಸುವರ್ಣ ಮೃತದೇಹ ಪತ್ತೆಯಾಗಿದೆ. ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.
ಇನ್ನು ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.
ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.
ನಿಧನ ವಾರ್ತೆ
sit ups as punishment: ಒಡಿಶಾದಲ್ಲಿ ವಿದ್ಯಾರ್ಥಿಗೆ ಶಿಕ್ಷಕ ಬಸ್ಕಿ ತೆಗೆಸಿದ್ದರಿಂದ ಬಾಲಕ ಸಾವು

ತರಗತಿ ಸಮಯದಲ್ಲಿ ಆಟವಾಡಿರುವುದಕ್ಕೆ ಶಿಕ್ಷಕರೊಬ್ಬರು ಬಸ್ಕಿ ತೆಗೆಸಿದ್ದರಿಂದ ಶಿಕ್ಷೆಗೆ ಒಳಗಾದ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜಾಜ್ಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಮಂಗಳವಾರ ಸಂಭವಿಸಿದೆ.
ಒರಾಲಿಯಲ್ಲಿರುವ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿರುವ ರುದ್ರ ನಾರಾಯಣ ಸೇಥಿ ತರಗತಿ ಅವಧಿಯಲ್ಲಿ ನಾಲ್ವರು ಸಹಪಾಠಿಗಳೊಂದಿಗೆ ಮೈದಾನದಲ್ಲಿ ಆಟವಾಡುತ್ತಿದ್ದ. ಇದನ್ನು ನೋಡಿದ ಶಿಕ್ಷಕರೊಬ್ಬರು ರುದ್ರ ನಾರಾಯಣ ಸೇಥಿಗೆ ಬಸ್ಕಿ ತೆಗೆಯುವ ಶಿಕ್ಷೆ ನೀಡಿದ್ದರು.
ಈ ಸಂದರ್ಭ ರುದ್ರ ನಾರಾಯಣ ಸೇಥಿ ಕುಸಿದು ಬಿದ್ದಿದ್ದಾನೆ. ಕೂಡಲೇ ರಸೂಲ್ಪುರ ಬ್ಲಾಕ್ನ ಒರಾಲಿ ಗ್ರಾಮದ ಸಮೀಪದ ನಿವಾಸಿಯಾಗಿರುವ ಆತನ ಹೆತ್ತವರಿಗೆ ಮಾಹಿತಿ ನೀಡಲಾಗಿತ್ತು. ಅನಂತರ ಬಾಲಕನ ಹೆತ್ತವರು ಹಾಗೂ ಶಿಕ್ಷಕರು ಬಾಲಕನನ್ನು ಸಮೀಪದ ಸಮುದಾಯ ಕೇಂದ್ರಕ್ಕೆ, ಅಲ್ಲಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಂತಿಮವಾಗಿ ಕತಕ್ನಲ್ಲಿರುವ ಎಸ್ಸಿಬಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಕೊಡೊಯ್ದರು. ಆದರೆ, ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಮಂಗಳವಾರ ರಾತ್ರಿ ಪ್ರಕಟಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಸೂಲ್ಪುರ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ನಿಲಾಂಬರ ಮಿಶ್ರಾ, ತಾನು ಇದುವರೆಗೆ ಯಾವುದೇ ಔಪಚಾರಿಕ ದೂರು ಸ್ವೀಕರಿಸಿಲ್ಲ. ಔಪಚಾರಿಕ ದೂರು ಸ್ವೀಕರಿಸಿದರೆ, ತನಿಖೆ ಆರಂಭಿಸುತ್ತೇನೆ ಹಾಗೂ ತಪ್ಪೆಸಗಿದವರ ವಿರುದ್ಧ ಅಗತ್ಯದ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ರಸೂಲ್ಪುರ ಬ್ಲಾಕ್ನ ಉಪ ಶಿಕ್ಷಣಾಧಿಕಾರಿ ಪ್ರವಾಂಜನ್ ಪಾಟಿ ಶಾಲೆಗೆ ಭೇಟಿ ನೀಡಿದ್ದಾರೆ ಹಾಗೂ ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.
ನಿಧನ ವಾರ್ತೆ
Heart Attack | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಪತ್ರಕರ್ತ ಶೇಖರ್ ಅಜೆಕಾರು ಹೃದಯಾಘಾತದಿಂದ ನಿಧನ

ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ (Heart Attack) ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿಯಾದ್ರೂ ಆ ವೇಳೆಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ ಅಜೆಕಾರು ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದವರು. ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು.
ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಇತ್ತೇಚೆಗಿನ ಕೆಲವು ವರ್ಷಗಳಿಂದ ಪತ್ರಿಕೋದ್ಯಮ ಬಿಟ್ಟು ಪೂರ್ಣವಾಗಿ ಸಾಹಿತ್ಯ ಮತ್ತು ಸಂಘಟನೆಯ ಕೆಲಸಗಳಲ್ಲಿ ತೊಡಗಿದ್ದರು.
ಗ್ರಾಮೀಣ ಭಾಗದ ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಥಮ ವಿದ್ಯಾರ್ಥಿ ಸಂಘದ ಅಧ್ಯಕ್ಷ, 2 ಬಾರಿ ಕಾಂಗ್ರೇಸಿನ ಅಭ್ಯರ್ಥಿಯಾಗಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭ ಹಾಗೂ ರಾಜಗೋಪುರದ ರುವಾರಿ ನೆಲ್ಲಿಕಟ್ಟೆ ಸುಧಾಕರ ಶೆಟ್ಟಿ ಇನ್ನಿಲ್ಲ

ಇತಿಹಾಸ ಪ್ರಸಿದ್ಧ ಕಿಲ್ಲೆ ಮೈದಾನದ ದೇವತಾ ಸಮಿತಿ ಗಣೇಶೋತ್ಸವ ಅಧ್ಯಕ್ಷರಾದ ಹಿರಿಯ ಕಾಂಗ್ರೇಸ್ ಮುಖಂಡರಾದ ಎನ್ ಸುಧಾಕರ್ ಶೆಟ್ಟಿ ಸೆ.10ರಂದು ನಿಧನರಾದರು.
ಸುಧಾಕರ್ ಶೆಟ್ಟಿಯವರು 2016ರಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ದೇವಸ್ಥಾನದ ಧ್ವಜಸ್ತಂಭ ಹಾಗೂ ರಾಜಗೋಪುರದ ಸಮರ್ಪಣೆಯ ರುವಾರಿಯಾಗಿದ್ದರು.
ನೆಲ್ಲಿಕಟ್ಟೆ ಸುಧಾಕರ ಶೆಟ್ಟಿಯವರು ದೇವತಾ ಸಮಿತಿಯ ಅಧ್ಯಕ್ಷರಾಗಿ ಕಳೆದ 40 ವರ್ಷಗಳಿಂದ ಕಿಲ್ಲೆ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ರೂವಾರಿಯಾಗಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷರಾಗಿ, ಬ್ರಹ್ಮರಥ ಸರ್ಮಪಣಾ ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದರು.
ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಸಂಚಾಲಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 10 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಥಮ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು.
1999ಯಲ್ಲಿ ಮತ್ತು 2004 ರಲ್ಲಿ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 1999ರಲ್ಲಿ ಬಿಜೆಪಿಯ ಡಿವಿ ಸದಾನಂದ ಗೌಡರು 62306 ಓಟ್ ಪಡೆದರೆ ಸುಧಾಕರ್ ಶೆಟ್ಟಿಯವರು 55013 ಓಟು ಪಡೆದಿದ್ದರು.
2004ರಲ್ಲಿ ಬಿಜೆಪಿಯ ಶಕುಂತಲ ಶೆಟ್ಟಿ 65119 ಓಟ್ ಪಡೆದರೆ 54007 ಓಟ್ ಪಡೆದು ಸೋಲನನ್ನುಭವಿಸಿದ್ದರು. ವಿದ್ಯಾರ್ಥಿ ದಿಸೆಯಿಂದಲೂ ಸಾಮಾಜಿಕ ಧಾರ್ಮಿಕ ರಾಜಕೀಯ, ಕ್ರೀಡಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಇವರು ನಗರದ ನೆಲ್ಲಿಕಟ್ಟೆಯ ನಿವಾಸಿಯಾಗಿದ್ದು ಸುಧಾಣ್ಣ ಎಂದೇ ಪುತ್ತೂರಿನ ಜನತೆ ಕರೆಯುತ್ತಾರೆ.
-
ಸಿನೆಮಾ2 days ago
ಬಿ – ಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ ಸುದ್ದಿ – ನಿಜಕ್ಕೂ ಅವರಿಬ್ಬರ ಮಧ್ಯೆ ಆಗಿರುವುದೇನು ?
-
ದಕ್ಷಿಣ ಕನ್ನಡ2 days ago
ಪುತ್ತೂರು : ಕುಡಿದು ಟೈಟಾಗಿದ್ದ ಚಾಲಕ ವಿವೇಕಾನಂದ ವಿದ್ಯಾ ಸಂಸ್ಥೆಯ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ – ಮಾಜಿ ಶಾಸಕಿಯ ಪುತ್ರನ ಕಾರು ಸೇರಿ 3 ವಾಹನಕ್ಕೆ ಢಿಕ್ಕಿ – ಪಾನಮತ್ತ ಚಲಾಯಿಸುತ್ತಿದ್ದ ಬಸ್ಸಿನಲ್ಲಿದ್ದರು ವಿದ್ಯಾರ್ಥಿಗಳು..̆
-
ದಕ್ಷಿಣ ಕನ್ನಡ2 days ago
ವಿಟ್ಲ : ಅಡಿಕೆ ಮರ ಮುರಿದು ಬಿದ್ದು ಮಹಿಳೆ ಸಾವು
-
ಸುಳ್ಯ1 day ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಜಕೀಯ2 days ago
CM Siddaramaiah: ಐಸಿಸ್ ಉಗ್ರ ಸಂಘಟನೆಯ ಬೆಂಬಲಿಗನ ಜತೆ ಹುಬ್ಬಳಿಯಲ್ಲಿ ವೇದಿಕೆ ಹಂಚಿಕೊಂಡ ಸಿ. ಎಂ.ಸಿದ್ದರಾಮಯ್ಯ : ಚಿತ್ರ ಸಹಿತ ಯತ್ನಾಳ್ ಗಂಭೀರ ಆರೋಪ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
Uncategorized2 days ago
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….
-
ಉದ್ಯೋಗ1 day ago
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
-
ಪುತ್ತೂರು1 day ago
Puthila Parivara | ಪುತ್ತೂರು ನಗರಸಭೆ 2 ವಾರ್ಡ್ ಮರುಮತದಾನ – ಬಿಜೆಪಿ ಕಾಂಗ್ರೇಸ್ ನಡುವೆ ಕಾರ್ಯಕರ್ತರ ಒತ್ತಾಯದಂತೆ ಪುತ್ತಿಲ ಪರಿವಾರ ಮತ್ತೊಂದು ಚುನಾವಣೆ ಎದುರಿಸುವುದು ಬಹುತೇಕ ಫಿಕ್ಸ್ : ವಿಧಾನಸಭಾ ಚುನಾವಣೆಯಲ್ಲಿ ಈ ವಾರ್ಡ್ ಗಳಲ್ಲಿ ಯಾರಿಗೆ ಎಷ್ಟು ಮತದಾನವಾಗಿತ್ತು ಗೊತ್ತೇ.?