Connect with us

ವರದಿಗಳು

Sabarimala | ಶಬರಿಮಲೆಯ ಅರವಣ ಪ್ರಸಾದ ಏಲಕ್ಕಿಯಲ್ಲಿ ಅತಿಯಾದ ಕೀಟನಾಶಕ ಪತ್ತೆ : ತಯಾರಿಕೆ ಮತ್ತು ಮಾರಾಟಕ್ಕೆ ಹೈಕೋರ್ಟ್ ತಡೆ

Ad Widget

Ad Widget

Ad Widget

Ad Widget Ad Widget

ಕೊಚ್ಚಿ, ಜ 12 : ಶಬರಿಮಲೆ (Sabarimala) ದೇವಸ್ಥಾನದ ಅರವಣ ಪ್ರಸಾದ ತಯಾರಿಕೆ ಮತ್ತು ಮಾರಾಟಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಪ್ರಸಾದ ತಯಾರಿಕೆಗೆ ಬೇಕಾಗುವ ಏಲಕ್ಕಿಯಲ್ಲಿ ಅತಿಯಾದ ಕೀಟನಾಶಕ ಪತ್ತೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Ad Widget

ಪ್ರಸಾದ ತಯಾರಿಕೆಗೆ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೀಟನಾಶಕ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ. ಅಲ್ಲದೆ ಪ್ರಸಾದ ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದೆ.

Ad Widget

Ad Widget

ಕಂಪೆನಿಯೊಂದರ ಅರ್ಜಿ ಹಿನ್ನೆಲೆಯಲ್ಲಿ ಏಲಕ್ಕಿಯನ್ನು ಪರೀಕ್ಷೆಗೊಳಪಡಿಸುವಂತೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಕೊಚ್ಚಿಯಲ್ಲಿರುವ ಭಾರತದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್ ನಲ್ಲಿ ಅರವಣ ಪಾಯಸಂ ಪರೀಕ್ಷೆ ನಡೆಸಲಾಗಿತ್ತು‌. ಈ ವೇಳೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೀಟನಾಶಕ ಬಳಸಿರುವುದು ಗೊತ್ತಾಗಿದೆ.
ಬಳಿಕ ಈ ಪರೀಕ್ಷಾ ಮಾದರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ನ್ಯಾಯಾಲಯವು ಪ್ರಸಾದ ವಿತರಣೆಗೆ ತಡೆ‌ ನೀಡಿದೆ.

Ad Widget

Ad Widget

ಇನ್ನು ದೇವಸ್ವಂ ಮಂಡಳಿ ಪ್ರತಿಕ್ರಿಯಿಸಿ, ಪ್ರಸಾದ ತಯಾರಿಕೆ ಯಂತ್ರ ಸ್ಛಚ್ಚಗೊಳಿಸಿ ಏಲಕ್ಕಿ ರಹಿತವಾಗಿ ಪಾಯಸಂ ತಯಾರಿಸಿ ವಿತರಿಸುತ್ತೇವೆ. ಸಾವಯವ ಏಲಕ್ಕಿ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

Ad Widget

Ad Widget
Click to comment

Leave a Reply

ಅಂತರ ರಾಜ್ಯ

Mungekar-ಮುಸ್ಲಿಮರಿಗೆ ದೇಶದ ಸಂಪತ್ತಿನಲ್ಲಿ ಮೊದಲ ಹಕ್ಕಿದೆ ಎಂದು ಸಿಂಗ್ ಹೇಳಿಲ್ಲ; ಮೋದಿಯವರ ಹೇಳಿಕೆ ಸುಳ್ಳು ಎಂದು ಕುಟುಕಿದ ಮುಂಗೇಕರ್

Ad Widget

Ad Widget

Ad Widget

Ad Widget Ad Widget

ಮುಂಬೈ: ಕಾಂಗ್ರೆಸ್ ನಾಯಕ, ಆರ್ಥಿಕ ತಜ್ಞ ಮತ್ತು ನೀತಿ ಆಯೋಗದ ಸದಸ್ಯರೂ ಆಗಿದ್ದ ಡಾ. ಬಾಲಚಂದ್ರ ಮುಂಗೇಕರ್‌ರವರು ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ.
ಡಾ. ಸಿಂಗ್ ಅವರ ಹೇಳಿಕೆಯ ಒಂದು ವಾಕ್ಯವನ್ನು ಪ್ರಸ್ತುತಪಡಿಸುವ ಮೂಲಕ ಮೋದಿ ಅವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಈಡೇರಿಸಿಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನವನ್ನು ಸೃಷ್ಟಿಸುವುದು ಬಿಜೆಪಿಯ ತಂತ್ರವಾಗಿದೆ. ಆದರೆ, ಜನರು ಮೋದಿ ಅವರ ಹೇಳಿಕೆಗಳನ್ನು ನಂಬುವುದಿಲ್ಲ ಎಂದು ಮುಂಬೈ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಡಾ.ಮುಂಗೇಕರ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಯುಪಿಎ ಸರ್ಕಾರದ ಭಾಗವಾಗಿದ್ದ ಡಾ. ಮುಂಗೇಕರ್, ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ತಳ್ಳಿ ಹಾಕಿದ್ದು, ಸತ್ಯವನ್ನು ಮುಂದಿಟ್ಟಿದ್ದಾರೆ.

Ad Widget

Ad Widget

2006ರ ಡಿಸೆಂಬರ್ 9ರಂದು ನಡೆದಿದ್ದ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ, ‘ದೇಶದ ದಲಿತರು, ಆದಿವಾಸಿಗಳು, ಒಬಿಸಿ, ಮಹಿಳೆಯರು, ಮಕ್ಕಳು ಅಭಿವೃದ್ಧಿಯ ಫಲವನ್ನು ಸವಿಯಬೇಕು ಮತ್ತು ಅಲ್ಪಸಂಖ್ಯಾತ ಸಮುದಾಯವೂ ಪ್ರಯೋಜನ ಪಡೆಯಬೇಕು’ ಎಂದು ಡಾ ಮನಮೋಹನ್ ಸಿಂಗ್ ಹೇಳಿದ್ದರು. ಅವರ ಹೇಳಿಕೆಯ ಅರ್ಥವೇನೆಂದರೆ, ಎಸ್‌ಸಿ ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಹೊಂದಿದ್ದಾರೆ ಎಂಬುದಾಗಿತ್ತು. ಸಭೆಯ ನಂತರ ಡಾ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಮತ್ತು ನಾನು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೆವು. ಅಲ್ಪಸಂಖ್ಯಾತರು ಎಂದರೆ ಧಾರ್ಮಿಕ ಅಲ್ಪಸಂಖ್ಯಾತರು ಮಾತ್ರವಲ್ಲದೆ ಭಾಷಾ ಅಲ್ಪಸಂಖ್ಯಾತರು ಸಹ ಹೌದು. ಸಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು ಎಂದು ಡಾ. ಮುಂಗೇಕರ್ ಹೇಳಿದ್ದಾರೆ.

Ad Widget

Ad Widget

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿರುತ್ತದೆ ಮತ್ತು ಅವರು ಹೆಚ್ಚು ಮಕ್ಕಳನ್ನು ಹೊಂದಿರುವುದರಿಂದ ಅದನ್ನು ಸಮುದಾಯದೊಳಗೆ ಹಂಚಿಕೆ ಮಾಡಲಾಗುತ್ತದೆ ಎಂದು ಸಿಂಗ್ ಹೇಳಿರುವುದಾಗಿ ಮೋದಿ ಈಗ ಹೇಳುತ್ತಿರುವುದು ಸರಿಯೇ? ಚುನಾವಣೆಯಲ್ಲಿ ಧಾರ್ಮಿಕ ತಿರುವು ನೀಡಲು ಅವರು ಹೀಗೆ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಹೇಳಿಕೆ ನೀಡುವುದು ಸೂಕ್ತವಲ್ಲ. 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಬಿಜೆಪಿ ಸೋಲುವ ಚಿತ್ರಣ ಸ್ಪಷ್ಟವಾಗಿದೆ. 40ರ ಗಡಿ ತಲುಪಲಾಗದೆ ಮೋದಿ ನಿರಾಸೆಗೊಂಡಿದ್ದಾರೆ’ಎಂದು ಮುಂಗೇಕರ್ ಕುಟುಕಿದ್ದಾರೆ.

Ad Widget

Ad Widget
Continue Reading

ಅಂತರ ರಾಜ್ಯ

PM Modi-ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ- ಮಹಿಳೆಯರ ಚಿನ್ನ ಹಾಗೂ ಸಂಪತ್ತನ್ನು ಜಪ್ತಿ ಮಾಡ್ತಾರೆ : ಚುನಾವಣಾ ಸಭೆಯಲ್ಲಿ ಮೋದಿ ವಿವಾದತ್ಮಾಕ ಭಾಷಣ

Ad Widget

Ad Widget

Ad Widget

Ad Widget Ad Widget

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಕಾಂಗ್ರೆಸ್ ಪಕ್ಷದ ಭರವಸೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

“ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ಸಂಪತ್ತಿನ ಮರು ಹಂಚಿಕೆಯ ಪ್ರಸ್ತಾಪ ಮಾಡಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಹ ಕೆಲವು ವರ್ಷಗಳ ಹಿಂದೆ ದೇಶದ ಸಂಪತ್ತಿನ ಮೇಲೆ ಮುಸ್ಲಿಮರಿಗೆ ಮೊದಲ ಅಧಿಕಾರ ಎಂದಿದ್ದರು. ಇದರ ಅರ್ಥವೇನು,” ಎಂದು ಪ್ರಶ್ನಿಸಿದರು.

Ad Widget

Ad Widget

‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್ ಮಾಡಲಿದೆ. “ನಗರ ನಕ್ಸಲ್ ಮನಸ್ಥಿತಿಯನ್ನು ಹೊಂದಿರುವವರು ನಮ್ಮ ತಾಯಿ ಹಾಗೂ ಸಹೋದರಿಯರ ಮಂಗಲಸೂತ್ರವನ್ನೂ ಬಿಡುವುದಿಲ್ಲ. ಆ ಮಟ್ಟಕ ಇಳಿಯಲೂ ಅವರು ಹೇಸಿಗೆ ಪಡುವುದಿಲ್ಲ. ಬಡವರ ಅಭಿವೃದ್ಧಿ ಬಿಜೆಪಿಯ ಗುರಿಯಾಗಿದೆ. ಆದರೆ ಕಾಂಗ್ರೆಸ್ ನವರು ಭಯ, ಹಸಿವು ಮತ್ತು ಭ್ರಷ್ಟಾಚಾರವನ್ನು ಅಂಗಡಿಗಳಲ್ಲಿ ಮಾರಾಟ ಮಾಡುತ್ತಾರೆ.” ಎಂದು ಆರೋಪಿಸಿದರು.

Ad Widget

Ad Widget

ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕುದಾರರು ಮುಸ್ಲಿಮರು’ ಎಂದಿದ್ದ ಹಿಂದಿನ ಪ್ರಧಾನಿ ಮನಮೋಹನ ಸಿಂಗ್ ಅವರ ನೀತಿ ಯಂತೆ ಮುಸಲ್ಮಾನರು, ಒಳನುಸುಳುಕೋರರು ಹಾಗೂ ‘ಹೆಚ್ಚು ಮಕ್ಕಳಿದ್ದವರಿಗೆ’ ಹಂಚಲಾಗುತ್ತದೆ’ಎಂದು ಕಿಡಿಕಾರಿದ್ದಾರೆ. ರಾಜಸ್ಥಾನದಲ್ಲಿ ಭಾನುವಾರ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಎಲ್ಲರ ಆಸ್ತಿ ಸಮೀಕ್ಷೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತದೆ.

Ad Widget

Ad Widget

‘ಹೆಚ್ಚು ಮಕ್ಕಳಿದ್ದವರಿಗೆ’ ನಿಮ್ಮ ಆಸ್ತಿ ಹೋಗುತ್ತೆ
ಕಾಂಗ್ರೆಸ್ ಗೆದ್ದರೆ ನಮ್ಮ ಮಾತೆಯರು ಹಾಗೂ ಸೋದರಿಯರ ಚಿನ್ನವನ್ನು ಜಪ್ತಿ ಮಾಡಲಾಗುತ್ತದೆ. ಹರಿದು ಹಂಚಲಾಗುತ್ತದೆ. ಯಾರಿಗೆ ಹಂಚಲಾಗುತ್ತದೆ? ಯಾರಿಗೆ ಹೆಚ್ಚು ಮಕ್ಕಳಿವೆಯೋ ಅವರಿಗೆ, ಅಂದರೆ ಒಳನುಸುಳುಕೋರರಿಗೆ ನಿಮ್ಮ ಸಂಪತ್ತು ಹೋಗುತ್ತದೆ. ಇದನ್ನು ನೀವು ಒಪ್ಪುತ್ತೀರಾ? – ನರೇಂದ್ರ ಮೋದಿ ಪ್ರಧಾನಿ

Continue Reading

ಅಂತರ ರಾಜ್ಯ

Television-ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್‌ ಮಾಡಲು ಕೇಂದ್ರದ ಸಿದ್ದತೆ – ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆ -ಹೊಸ ಸುದ್ದಿ ಸಂಸ್ಥೆ ಆರಂಭಕ್ಕೆ ಪ್ಲಾನ್‌

Ad Widget

Ad Widget

Ad Widget

Ad Widget Ad Widget

ನವದೆಹಲಿ (ಏ.22): ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮರಳಿ 3ನೇ ಸಲ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ದೂರದರ್ಶನ ಮತ್ತು ಅದರ ಮಾತೃಸಂಸ್ಥೆ ಪ್ರಸಾರ ಭಾರತಿಗೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಚಿಹ್ನೆ ಬಣ್ಣ ಕಿತ್ತಳೆ ವರ್ಣಕ್ಕೆ ಬದಲಾವಣೆಯಾಗುವ ಮೂಲಕ ಸುದ್ದಿಯಲ್ಲಿರುವ ಕೇಂದ್ರ ಸರ್ಕಾರದ ಅಧೀನದ ದೂರದರ್ಶನ, ಮುಂದಿನ ದಿನಗಳಲ್ಲಿ ಬೃಹತ್‌ ಬದಲಾವಣೆಗೆ ಸಜ್ಜಾಗಿದೆ.

Ad Widget

Ad Widget

Ad Widget

Ad Widget

Ad Widget

ಹಾಲಿ ಭಾರತೀಯ ಗ್ರಾಹಕರಿಗೆ ಸೀಮಿತವಾಗಿರುವ ದೂರದರ್ಶನವನ್ನು ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವ ಮತ್ತು ಈ ಸಂಬಂಧ 15 ದೇಶಗಳಲ್ಲಿ ಪ್ರಾದೇಶಿಕ ಕಚೇರಿಗಳನ್ನು ಆರಂಭಿಸುವ ಗುರಿಯನ್ನೂ ಸರ್ಕಾರ ಹಾಕಿಕೊಂಡಿದೆ ಎಂದು ಇಂಗ್ಲಿಷ್‌ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಜೊತೆಗೆ ಪ್ರಸಾರ ಭಾರತಿಯ ಶಬ್ದ್‌ ಪೋರ್ಟಲ್‌ ಅನ್ನು ಜಾಗತಿಕ ಸುದ್ದಿಸಂಸ್ಥೆಯಾಗಿ ಅಭಿವೃದ್ಧಿಪಡಿಸಲಾಗುವುದು. ಇದರ ಮೂಲಕ ನಿತ್ಯ ಆಡಿಯೋ, ವಿಡಿಯೋ, ಫೋಟೋ ಮತ್ತು ಇತರೆ ಸೇವೆ ನೀಡಲಾಗುವುದು.

Ad Widget

Ad Widget

ಇದರ ವ್ಯಾಪ್ತಿಗೆ ದೇಶ-ವಿದೇಶಗಳ ಸಾವಿರಕ್ಕೂ ಹೆಚ್ಚು ಮಾಧ್ಯಮಗಳನ್ನು ಸೇರಿಸಿಕೊಳ್ಳಲಾಗುವುದು. ಜೊತೆಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಹಬ್‌ ಆರಂಭಿಸುವ ಮತ್ತು ಭಾರತ್‌ ನಮನ್‌ ಎಂಬ ಪೋರ್ಟಲ್‌ ಆರಂಭಿಸುವ ಇರಾದೆಯೂ ಇದೆ. ಇದರಲ್ಲಿ ದೂರದರ್ಶನದ ಎಲ್ಲಾ ಹಳೆಯ ಮಾಹಿತಿಗಳು, ಪುಸ್ತಕಗಳು, ಫೋಟೋ ಜನರಿಗೆ ಸುಲಭವಾಗಿ ಸಿಗುವಂತೆ ನೋಡಿಕೊಳ್ಳಲಾಗುವುದು. ಇನ್ನು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತತ್‌ಕ್ಷಣದ ಭಾಷಾಂತರ, ಉಪಶೀರ್ಷಿಕೆ ಮತ್ತು ಕೃತಕ ಬುದ್ಧಿಮತ್ತೆ ಆಧರಿತ ವಿಷಯ ಸಂಗ್ರಹ ಸೇವೆ ನೀಡಲಿದೆ.

Ad Widget

Ad Widget

ಅಲ್ಲದೆ ಜಾಗತಿಕ ಮಾಧ್ಯಮ ಮತ್ತು ಮನರಂಜನಾ ಸಮ್ಮೇಳನ ಆಯೋಜಿಸುವ ಮತ್ತು ಸುಳ್ಳು ಸುದ್ದಿ ಪತ್ತೆಗೆ ಇರುವ ಪಿಐಬಿ ಫ್ಯಾಕ್ಟ್‌ ಚೆಕ್‌ ಅನ್ನು ಇನ್ನಷ್ಟು ವಿಸ್ತರಿಸುವ ಗುರಿ ರೂಪಿಸಲಾಗಿದೆ. ಇನ್ನು ದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮಾಸ್‌ ಕಮ್ಯುನಿಕೇಷನ್‌ನಲ್ಲಿ ಸ್ನಾತಕೋತ್ತರ ಕೋರ್ಸ್‌ ಆರಂಭಿಸುವ ಉದ್ದೇಶವೂ ಇದೆ. ಅಲ್ಲದೆ ಡಿಡಿ ಫ್ರಿ ಡಿಶ್‌ ಸೇವೆಯನ್ನು ನೆರೆಹೊರೆಯ ದೇಶಗಳಿಗೂ ವಿಸ್ತರಿಸುವ, ಅದರ ವ್ಯಾಪ್ತಿಗೆ ಇನ್ನಷ್ಟು ಚಾನೆಲ್‌ ಸೇರಿಸಿಕೊಳ್ಳುವ ಇರಾದೆಯೂ ಇದೆ. ಸತತ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಮೋದಿ ಸರ್ಕಾರ, ಹೊಸ ಸರ್ಕಾರದಲ್ಲಿನ ತನ್ನ ಮೊದಲ 100 ದಿನದ ಕಾರ್ಯಕ್ರಮ ಮತ್ತು ಮುಂದಿನ 5 ವರ್ಷಗಳ ಯೋಜನೆಯ ಭಾಗವಾಗಿ ಈ ಕಾರ್ಯಕ್ರಮ ರೂಪಿಸಿದೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading