Ad Widget

Video Viral: ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರೌಡಶಾಲಾ ಶಿಕ್ಷಕ ಮತ್ತು 9 ನೇ ತರಗತಿ ವಿದ್ಯಾರ್ಥಿನಿ ಖಾಸಗಿ ವಿಡಿಯೊ

WhatsApp Image 2023-01-15 at 10.27.59
Ad Widget

Ad Widget

Ad Widget

 School Teacher and Student Video Viral : ಬೆಳಗಾವಿ : ಜ 15 : ಪ್ರೌಢಶಾಲೆಯ ಶಿಕ್ಷನೊಬ್ಬ ತನ್ನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊʼವೊಂದು  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಘಟನೆಯೋಮದು ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ . ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಶಾಲೆಲೆ ಸಂಬಂಧಿಸಿದ ವಿಡಿಯೋ ಇದು ಎಂದು ಹೇಳಲಾಗುತ್ತಿದೆ

Ad Widget

Ad Widget

Ad Widget

Ad Widget

ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯ ಜತೆ ಪ್ರೀತಿಯ  ನಾಟಕವಾಡಿ ತನ್ನ ಬಲೆಗೆ ಬೀಳಿಸಿಕೊಂಡಿದ್ದ  . ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ

Ad Widget

Ad Widget

Ad Widget

Ad Widget

 ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆ  ವಿದ್ಯಾರ್ಥಿನಿಯನ್ನು ಕಾಮುಕ ಶಿಕ್ಷಕ  ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ ಇಬ್ಬರೂ ಏಕಾಂತದಲ್ಲಿ ಇದ್ದ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿಕೊಂಡಿದ್ದ. ಈ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್‌ ಆಗಿವೆ’ ಎಂದು ಮೂಲಗಳು ಮಾಹಿತಿ ನೀಡಿವೆ.

ವಾರದ ಹಿಂದೆಯೇ ಶಾಲಾ ಆಡಳಿತ ಮಂಡಳಿಗೆ ಈ ಪ್ರಕರಣ ಗೊತ್ತಾಗಿತ್ತು. ಆಡಳಿತ ಮಂಡಳಿಯವರು ಶಿಕ್ಷಕನನ್ನು ಅಮಾನತು ಮಾಡಿದ್ದಾರೆ. ಈ ಬಗ್ಗೆ ಶನಿವಾರ ರಾತ್ರಿಯವರೆಗೂ ಯಾವುದೇ ದೂರು ದಾಖಲಾಗಿಲ್ಲ. ಈ ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿವೆ.

Ad Widget

Ad Widget

ʼವಿಡಿಯೊಗಳು ಎಲ್ಲೆಡೆ ಹರಿದಾಡಿದ್ದರಿಂದ ವಿದ್ಯಾರ್ಥಿನಿ ನೊಂದಿದ್ದಾಳೆ. ಬಡ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮೋಸ ಮಾಡಲಾಗಿದೆ. ಈಗ ಆಕೆ ಶಾಲೆಯಿಂದ ದೂರ ಉಳಿದಿದ್ದಾಳೆ. ಆಕೆಯ ಪಾಲಕರೂ ನೊಂದಿದ್ದಾರೆ. ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಬೇಕು. ಆಕೆಯ ಮುಂದಿನ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಬೇಕು’ ಎಂದು ಎಬಿವಿಪಿ ತಾಲ್ಲೂಕು ಘಟಕದ ಸಂಚಾಲಕ ಮಂಜುನಾಥ ಹಂಚಿನಮನಿ ಆಗ್ರಹಿಸಿದ್ದಾರೆ.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: