Ad Widget

Praveen Nettar | ಬಿಜೆಪಿಯಲ್ಲಿ ಡ್ರೈವರ್ ಗಳ ಕೊಲೆ ರೂಢಿಯಾಗಿದೆ – ಪ್ರವೀಣ್ ನೆಟ್ಟಾರ್ ಕೊಲೆ ಮಾದರಿಯಲ್ಲೇ ಯತ್ನಾಳ್ ಡ್ರೈವರ್ ಕೊಲೆಯಾಗಿದೆ – ನಿರಾಣಿ ಮಾತಿನ ಮರ್ಮವೇನು? ಮಂಪರು ಪರೀಕ್ಷೆ ನಡೆಸಿದರೆ ಸತ್ಯ ಹೊರ ಬರ್ತದೆ : ಬಿ.ಕೆ ಹರಿಪ್ರಸಾದ್

FB_IMG_1673774999706
Ad Widget

Ad Widget

ಬಿಜೆಪಿ ನಾಯಕರಾದ ಯತ್ನಾಳ್ ಮತ್ತು ನಿರಾಣಿ ವಾಗ್ಸಮರ ಮುಗಿಲು ಮುಟ್ಟಿದೆ. ಈ ನಡುವೆ ಗಂಭೀರ ವಿಚಾರಗಳ ಆರೋಪ ಹೊರಿಸಿಕೊಂಡಿದ್ದಾರೆ. ಡ್ರೈವರ್ ಕೊಲೆ , ಸೆಕ್ಸ್ ಸಿಡಿ, ಸಹಿತ ಹಲವು ಗಂಭೀರ ಆರೋಪಗಳನ್ನು ಹೊರಿಸಿಕೊಂಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಡ್ರೈವರ್ ಆಗಿದ್ದ ಪ್ರವೀಣ್ ನೆಟ್ಟಾರ್ (Praveen Nettar) ಕೊಲೆಯ ಸಂಬಂಧ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಟೀಲ್ ರನ್ನು ಮಂಪರು ಪರೀಕ್ಷೆ ಒಳಪಡಿಸುತ್ತೇವೆ ಎಂದಿದ್ದ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ , ಇದೀಗ ಯತ್ನಾಳ್ ಚಾಲಕನ ಕೊಲೆಗೂ ಮಂಪರು ಪರೀಕ್ಷೆ ಮಾಡಬೇಕು ಎಂದಿದ್ದಾರೆ.

Ad Widget

Ad Widget

Ad Widget

Ad Widget

ಸ್ವಯಂ ಘೋಷಿತ ಶಿಸ್ತಿನ ಪಕ್ಷದ ಬೀದಿ ರಂಪಾಟ ರಾಜ್ಯದ ಜನರಿಗೆ ಮನರಂಜನೆಯ “ಸಂತೋಷ”ಕೂಟ ಏರ್ಪಡಿಸಿದೆ. ಸ್ವ ಪಕ್ಷದ ನಾಯಕರಿಗೆ ಬಿರುದು ಬಾವಲಿಗಳ ಸುರಿಮಳೆ ಆಗುತ್ತಿದೆ.ಇದೊಂದು ಟ್ರೇಲರ್ ಅಷ್ಟೇ, ಬತ್ತಳಿಕೆಯ ಬಾಣಗಳು ಮತ್ತಷ್ಟು”ಸಂತೋಷ” ಪಡಿಸುತ್ತದೆ ಕಾದು ನೋಡಿ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಸರ್ಕಸ್ ಅಲ್ಲಿ ಪ್ರಾಣಿಗಳನ್ನ ತರಬೇತಿ ನೀಡಿ ಮೂಗುದಾರ ಹಾಕಿ ಮನರಂಜನೆ ಮಾಡಬಹುದು, ಅಪ್ಪಿತಪ್ಪಿ ಬಿಟ್ರೆ ಎಲ್ಲರನ್ನೂ ತಿಂದು ಹಾಕುತ್ತದೆ. ಬಿಜೆಪಿಯಲ್ಲಿ ಈಗಾಗುತ್ತಿರುವುದು ಅದೇ.

ಕೊಲೆಗಡುಕತನ, ಪಿಂಪ್ ದಂಧೆ, ಹಫ್ತಾ ವಸೂಲಿ ತನ್ನವರನ್ನೂ ಬಿಡದೆ ತಿನ್ನುತ್ತಿದೆ. ಮೂಗುದಾರ ತಪ್ಪಿಯಾಗಿದೆ, ಹತೋಟಿಯಲ್ಲಿಡಲು ಸಾಧ್ಯವೇ ಇಲ್ಲ. ಬಿಜೆಪಿಯಲ್ಲಿ ಮೇಲೆಲ್ಲಾ ತಳಕು-ಬಳಕು,ಒಳಗೆಲ್ಲ ಬರೀ ಹುಳುಕು-ಕೊಳಕು ನಾರುತ್ತಿದೆ.ಕಾಂಗ್ರೆಸ್ ತಟ್ಟೆಯಲ್ಲಿ ನೊಣ ಹುಡಕದೇ,ನಿಮ್ಮಲ್ಲಿ ಹೆಗ್ಗಣ ಬಿದ್ದು ವಿಲ ವಿಲ ಒದ್ದಾಡುತ್ತಿದೆ ಒಮ್ಮೆ ಕಣ್ಣಾಡಿಸಿ.

Ad Widget

Ad Widget

ಸರ್ಕಾರ ಮ್ಯಾನೇಜ್ ಮಾಡುವ ಸಿಎಂ,ಪಕ್ಷದ ಮೇಲೆ ಹಿಡಿತವಿಲ್ಲದ ಕಾಮಿಡಿಯನ್ ಅಧ್ಯಕ್ಷರಾಗಿರುವಾಗ ಹಾದಿ ಬೀದಿಯಲ್ಲಿ ಹೊಡೆದಾಡುವಂತಾಗಿದೆ.

ಸಿಎಂ ಆಗಲು ಎರಡುವರೆ ಸಾವಿರ ಕೋಟಿ ಹಣದ ಬೇಡಿಕೆ, ಮಂತ್ರಿಯಾಗಲು ಪಿಂಪ್ ಕೆಲಸ,ಸಿಡಿ ಬಿಡುಗಡೆಯ ಬೆದರಿಕೆ.ಮಾಜಿ ಸಿಎಂ ಮಗನ ದೃಷ್ಠವತಾರಗಳು.ಈ ಆರೋಪಗಳು ಕೇಂದ್ರದ ಮಾಜಿ ಮಂತ್ರಿ ಯತ್ನಾಳ್ ಸ್ವಪಕ್ಷದವರ ಮೇಲೆ ಎಗರಿ ಬಿದ್ದ ಪರಿ.

ಅಕ್ರಮ ಹಣ ದಂಧೆಗಳ ಬಗ್ಗೆ ಸಿಬಿಐ, ಇಡಿ, ಐಟಿ,ಎಲ್ಲವೂ ದೆಹಲಿಯ ಚಳಿಯಲ್ಲಿ ಬೆಚ್ಚಗೆ ಕಾವು ಪಡೆಯುತ್ತಿರಬೇಕು. ಬಿಜೆಪಿಯಲ್ಲಿ ಡ್ರೈವರ್ ಗಳನ್ನು ಕೊಲೆ ಮಾಡುವುದು ರೂಢಿಯಾಗುತ್ತಿದೆ. ಸಚಿವ ನಿರಾಣಿಯವರ ಮಾತಿನ ಮರ್ಮವೇನು? ಯತ್ನಾಳ್ ಅವರ ಡ್ರೈವರ್ ಕುಮಾರ್ ಕೊಲೆಯಾದದ್ದು ಹೇಗೆ? ಯಾವಾಗಾ?ಮುಚ್ಚಿಟ್ಟಿದ್ಯಾರು?

ಇದು ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಮಾದರಿಯಂತಿದೆ.ಮಂಪರು ಪರೀಕ್ಷೆ ನಡೆದರೆ ಮಾತ್ರ ಸತ್ಯ ಬಹಿರಂಗವಾಗಲು ಸಾಧ್ಯ.

ಶಾಸಕ ಯೋಗೇಶ್ವರ್ ಆಡಿಯೋದಲ್ಲಿ ವಿಶೇಷವೇನಿಲ್ಲ.ಕೊಲೆ ಪ್ರಕರಣದಲ್ಲಿ ನ್ಯಾಯಾಲಯವೇ ಛೀಮಾರಿ ಹಾಕಿ ಗಡಿ ಪಾರದ ಕೇಂದ್ರ ಗೃಹ ಸಚಿವರು ರೌಡಿಯಲ್ಲದೆ ಮತ್ತೇನು?ಅಧಿಕಾರಕ್ಕೇರಲು ಸಾದ್ಯವಿಲ್ಲ ಎಂದು ಬಿಜೆಪಿ ಶಾಸಕರಿಗೆ ಮನದಟ್ಟಾಗಿದೆ.ಹೀಗಾಗಿ ಆಪರೇಷನ್ ಕಮಲಾಸೂರರು ರಾಜ್ಯಕ್ಕೆ ಕಾಲಿಡುತ್ತಿದ್ದಾರೆ.ಇದಕ್ಕೆ ಜನ ಅವಕಾಶ ನೀಡುವುದಿಲ್ಲ.

ಬಿಜೆಪಿಗೆ ಬಿಜೆಪಿಯೇ ಶತೃವಾಗಿದೆ. ಜನಾದೇಶ ಈಗಾಗಲೇ ಸ್ಪಷ್ಟವಾಗಿದೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿರುವಂತೆ ಬಿಜೆಪಿ ನಾಯಕರು ಟ್ರೇಲರ್ ಗಳು ಬಿಡುಗಡೆ ಮಾಡುತ್ತಿದ್ದಾರೆ. ಕಾವು ಹೆಚ್ಚಾದಂತೆ ಸಿನಿಮಾ,ಸಿಡಿಗಳು ಬಿಡುಗಡೆ ಆಗಬಹುದು. ಪಿಚ್ಚರ್ ಅಭಿ ಬಾಕಿ ಹೈ..! ಎಂದು ಬಿಕೆ ತನ್ನ ಫೇಸ್ಬುಕಲ್ಲಿ ಹೇಳಿಕೊಂಡಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: