ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಪದಗ್ರಹಣ ಸಮಾರಂಭ ಜ.16ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಪುತ್ತೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪದಪ್ರದಾನ ನಡೆಸಿಕೊಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ಡಿವೈಎಸ್‌ಪಿ ವೀರಯ್ಯ್ ಹಿರೇಮಠ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಶಿವಾನಂದ ಆಚಾರ್ಯ, ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ಜಿ. ಶ್ರೀಧರ್, ಸಂತ ಫಿಲೋಮಿನಾ ಕಾಲೇಜಿನ ಪ್ರಿನ್ಸಿಪಾಲ್ ಡಾ.ರೆ.ಫಾ. ಆಂಟನಿ ಪ್ರಕಾಶ್ ಮೊಂತೇರೋ, ಮಂಗಳೂರು ಹಿದಾಯ ಫೌಂಡೇಶನ್‌ನ ಅಧ್ಯಕ್ಷರಾದ ಜಿ. ಮಹಮ್ಮದ್ ಹನೀಫ್ ಹಾಜಿ ಭಾಗವಹಿಸಲಿದ್ದಾರೆಂದು ಪ್ರಜಾವಾಣಿ ಪತ್ರಿಕೆಯ ವರದಿಗಾರರಾದ ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ