ಪುತ್ತೂರು : ಜ 19 : ಪ್ರತಿಷ್ಠಿತ ಕ್ಯಾಂಪ್ಕೋ ಲಿಮಿಟೆಡ್ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ 5ನೇ ಕೃಷಿಯಂತ್ರ ಮೇಳ -2023 ಹಾಗೂ ಕನಸಿನ ಮನೆ ಎನ್ನುವ ಬೃಹತ್ ಪ್ರದರ್ಶನವು ಮೂರು ದಿನಗಳ ಕಾಲ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಈ ಕೃಷಿ ಯಂತ್ರ ಮೇಳದಲ್ಲಿ ಕೃಷಿಯಲ್ಲಿ ತಮ್ಮದೇ ಆದ ರೀತಿಯಲ್ಲಿ ಹೊಸತನವನ್ನು ಹುಡುಕಿ ಅದಕ್ಕೆ ಪೂರಕವಾದ ಯಂತ್ರವನ್ನು ಅನ್ವೇಷಿಸಿ ಅದನ್ನು ಬಳಸಿ ಯಶಸ್ವಿಯಾದ ರೈತರಿಗೆ ತಮ್ಮ ಉತ್ಪನ್ನವನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯನ್ನು ಉಚಿತವಾಗಿ ನೀಡಲು ಸಂಘಟಕರು ನಿರ್ಧರಿಸಿದ್ದಾರೆ. ಫೆಬ್ರವರಿ 10 ಶುಕ್ರವಾರದಿಂದ 12 ಆದಿತ್ಯವಾರದವರೆಗೆ ನಡೆಯಲಿರುವ ಈ ಬೃಹತ್ ಪ್ರದರ್ಶನದಲ್ಲಿ ತಾವು ಸಂಶೋಧಿಸಿದ ಯಂತ್ರಗಳನ್ನು ಪ್ರದರ್ಶಿಸ ಬಯಸುವವರು ಸಂಘಟಕರ ಸಂಪರ್ಕ ಸಂಖ್ಯೆ: 7892857156 ಅಥಾವ WhatsApp :: 9448723575 ಸಂಪರ್ಕಿಸಬಹುದಾಗಿದೆ.
ಇದರ ಜತೆಗೆ ಕೃಷಿ ಕ್ಷೇತ್ರದಲ್ಲಿ ಯಂತ್ರಗಳ ಕುರಿತಾಗಿ ಉತ್ತಮ ಸಂಶೋಧನೆಗಳನ್ನು ಮಾಡಿದವರನ್ನು ಗುರುತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕುರಿತಾಗಿ ತಿಳುವಳಿಕೆಯಲ್ಲಿರುವ ಸಾಧಕರ ಮಾಹಿತಿಯನ್ನು ಸಂಘಟಕರ ಗಮನಕ್ಕೆ ತರುವಂತೆಯೂ ಪ್ರಕಟನೆಯಲ್ಲಿ ಕೋರಲಾಗಿದೆ.
