ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು (Prajadhvani Yatra) ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಸುಮಾರು 50 ಸಾವಿರ ಜನರ ಕೂಡುವಿಕೆಯಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಎಂ.ಎಲ್.ಸಿ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ ಬಿಡುಗಡೆಗೊಳ್ಳುತ್ತಿಲ್ಲ. ಸಂಪೂರ್ಣ ನಿಂತುಹೋಗಿದೆ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. ಇದನ್ನು ಖಂಡಿಸಲು ಯಾತ್ರೆ ನಡೆಸಲಾಗುತ್ತಿದೆ” ಎಂದವರು ಹೇಳಿದರು.
“ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ಜಿಎಸ್ಟಿ, ಟ್ಯಾಕ್ಸ್ ನಿಂದ ಜನರು ರೋಸಿಹೋಗಿದ್ದು ಅವರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಪ್ರಜಾಧ್ವನಿ ಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ. ಇದೇ ಸಂದರ್ಭದಲ್ಲಿ ಪುತ್ತೂರಿನ ಅಶೋಕ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ” ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರೋಜಿ ಜಾನ್, ಎಂ.ಬಿ. ಪಾಟೀಲ್, ಕೆಪಿಸಿಸಿ ಉಸ್ತುವಾರಿ ಸಲೀಂ ಅಹಮ್ಮದ್, ಮಧು ಬಂಗಾರಪ್ಪ, ಧ್ರುವ ನಾರಾಯಣ್, ಹೆಚ್. ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ನವೀನ್ ಡಿಸೋಜ ಉಪಸ್ಥಿತರಿದ್ದರು.
ಯುವ ಕಾಂಗ್ರೇಸ್‍ನ ಪೂರ್ವಬಾವಿ ಸಭೆ :
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭರತ್ ಮುಂಡೋಡಿ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಕೆಪಿವೈಸಿ ಪ್ರಧಾನ ಕಾರ್ಯದರ್ಶಿ ಆಶಿತ್ ಪಿರೇರಾ, ಜಿಲ್ಲಾ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಅಭಿಷೇಕ್ ಬೆಳ್ಳಿಪ್ಪಾಡಿ, ಕೆಪಿವೈಸಿ ಕಾರ್ಯದರ್ಶಿ ನಾಸೀರ್ ಸಾಮಾನಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ಪ್ರಸಾದ್ ಮಲ್ಲಿ, ಫೈಝಲ್ ಕಡಬ, ಅಶ್ವಥ್ ರಾಜ್, ನವೀದ್ ಅಖ್ತರ್, ರೋಷನ್ ರೈ,
ಅಭಿನಂದನ್ ಹರೀಶ್, ದೀಕ್ಷಿತ್ ಅತ್ತಾವರ್, ಹಸನ್ ಫಲ್ನೀರ್, ಬಿ.ಎಸ್ ಇಸ್ಮಾಯಿಲ್, ಮೊಹಮ್ಮದ್ ಇರ್ಷಾದ್, ಸಂಜಾನ ಚಲವಾದಿ, ಆಲ್ವಿನ್ ಮೊಂತೆರೋ, ನೌಶೀನ್, ಅಭಿದೇವ್ ಅರಿಗ ಬ್ಲಾಕ್ ಅಧ್ಯಕ್ಷರಾದ ಶಾಹುಲ್ ಹಮೀದ್, ಅಶೋಕ್ ಪೂಜಾರ್, ಫಾರೂಕ್ ಪೆರ್ನೆ, ಸುನಿಲ್ ಕುಮಾರ್, ರಾಕೇಶ್, ಇಬ್ರಾಹಿಂ ನವಾಝ್, ಶ್ರೀಪ್ರಸಾದ್ ಪಾಣಾಜೆ, ಜೈಸನ್ ಸುರತ್ಕಲ್, ಕೆಪಿವೈಸಿ ಸಂಯೋಜಕ ಸೌಹಾನ್ ಎಸ್.ಕೆ, ಮುಖಂಡರಾದ ಪ್ರಹ್ಲಾದ್, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ನಜೀಬ್ ಮಂಚಿ, ಮೂನ ಜುಲೇಕ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.