ಕಾರ್ಕಳ
Pramod Muthalik | ಕಾರ್ಕಳ ಪಕ್ಷೇತರ ಅಭ್ಯರ್ಥಿಯಾಗಿ ಫೈರ್ ಬ್ರಾಂಡ್ ಹಿಂದೂ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ : ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು ಎಂದು ಸವಾಲು ಹಾಕಿದ ಮುತಾಲಿಕ್

ಉಡುಪಿ: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ (Pramod Muthalik) ಅಧಿಕೃತ ಘೋಷಣೆ ಮಾಡಿದ್ದಾರೆ.
ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ಧನಿಯಾಗಿ ಈ ಘೋಷಣೆ ಮಾಡುತ್ತಿದ್ದೇನೆ. ಏಳೆಂಟು ಬಾರಿ ಕ್ಷೇತ್ರವನ್ನು ಸುತ್ತಾಡಿದ್ದೇನೆ ಜನ ಬೆಂಬಲಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂಗಳಿಗೆ ನೋವಾಗಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಿಂದುತ್ವ ಭ್ರಷ್ಟಾಚಾರ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದರು.
‘ನಾನು ಬಿಜೆಪಿ, ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ. ಬಿಜೆಪಿಯೊಳಗಿನ ಕೆಲ ವ್ಯಕ್ತಿಗಳ ತತ್ವ ಸಿದ್ಧಾಂತ ವಿರುದ್ಧ ನನ್ನ ಹೋರಾಟ. ಬಿಜೆಪಿ ಅಂದು ಮಾಡಿದ ಅವಮಾನ ಎಂದಿಗೂ ಮರೆಯೋದಿಲ್ಲ. ಹಿಂದುತ್ವ ಪ್ರಾಮಾಣಿಕತೆ ಇದ್ದರೆ ನನಗೆ ಬಿಜೆಪಿ ಕಾರ್ಕಳದಲ್ಲಿ ಬೆಂಬಲ ಕೊಡಬೇಕು’ ಎಂದು ಅವರು ಹೇಳಿದರು. ಈ ಮೂಲಕ ಕಾರ್ಕಳದಲ್ಲಿ ತನ್ನ ಶಿಷ್ಯ ಸುನಿಲ್ ಕುಮಾರ್ ಇದೀಗ ತನ್ನ ಗುರುವಿಗೆ ಈ ಸ್ಥಾನ ಬಿಟ್ಟುಕೊಡುತ್ತಾರ ನೋಡಬೇಕಾಗಿದೆ.
ಪತ್ರಿಕಾಗೋಷ್ಠಿ ಯಲ್ಲಿ ಶ್ರೀರಾಮಸೇನೆ ಮುಖಂಡರಾದ ಗಂಗಾಧರ ಕುಲಕರ್ಣಿ, ಹರೀಶ್ ಅಧಿಕಾರಿ, ಸುಧೀರ್ ಹೆಬ್ರಿ, ಸುಂದರ, ಜಯರಾಮ್ ಉಪಸ್ಥಿತರಿದ್ದರು
ಕಾರ್ಕಳ
ಪರಶುರಾಮ್ ಥೀಮ್ ಪಾರ್ಕ್ ಹಗರಣ: ತನಿಖೆಗೆ ಸಿದ್ದರಾಮಯ್ಯ ಆದೇಶ – ಮಾಜಿ ಸಚಿವ ಸುನೀಲ್ ಕುಮಾರ್ ಕಾರ್ಕಳ ಗೆ ಸಂಕಟ

ಉಡುಪಿ: ಪರಶುರಾಮ್ ಥೀಂ ಪಾರ್ಕ್ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಕೊನೆಗೂ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶ ನೀಡಿದ್ದಾರೆ. ಈ ಬಗ್ಗೆ ಸಮಗ್ರ ನಡೆಸುವಂತೆ ಅವರು ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಕುರಿತು ವಿವರಗಳನ್ನು ನೀಡಿದ MLC ಮಂಜುನಾಥ್ ಭಂಡಾರಿ, ಪರಶುರಾಮ್ ಥೀಮ್ ಪಾರ್ಕ್ ಧಾರ್ಮಿಕ ಸ್ಥಳವೋ ಅಥವಾ ಪ್ರವಾಸಿ ತಾಣವೋ ಎಂಬ ಗೊಂದಲವಿದೆ. ಸಿಎಂ ಆಗಿದ್ದ ಬೊಮ್ಮಾಯಿ ಬಂದು ಉದ್ಘಾಟಿಸಿದ ಪ್ರತಿಮೆ ದಿಢೀರ್ ಕಣ್ಮರೆಯಾಗಿದೆ. ಈ ವಿಷಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಗಮನಕ್ಕೆ ಬಂದಿದೆ.
ಅವರು ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ. ಪರಶುರಾಮ್ ಪ್ರತಿಮೆಯ ಸೊಂಟದ ಮೇಲಿನ ಭಾಗವು ಕಾಣೆಯಾಗಿದೆ. ಅಧಿಕಾರಿಗಳನ್ನು ಕೇಳಿದಾಗ ವಿನ್ಯಾಸ ಬದಲಾವಣೆಗೆ ಕಳುಹಿಸಲಾಗಿದೆ ಎನ್ನುತ್ತಾರೆ. ಆದರೆ ಈ ಸ್ಥಳವು ಗೋಮಾಳ ಭೂಮಿಯಾಗಿದೆ.
ಅಲ್ಲಿ ಪಾರ್ಕ್ ನಿರ್ಮಿಸದಂತೆ ಸರ್ಕಾರ ಹಿಂದೆಯೇ ಆದೇಶ ನೀಡಿತ್ತು ಎಂದು ಭಂಡಾರಿ ಮಾಹಿತಿ ನೀಡಿದರು.ಒಮ್ಮೆ ಮುಖ್ಯಮಂತ್ರಿ ಪ್ರತಿಮೆ ಉದ್ಘಾಟಿಸಿದ ಬಳಿಕ ಜಿಲ್ಲಾಧಿಕಾರಿ ಅನುಮತಿ ಪಡೆಯದೆ ಅದನ್ನು ಸ್ಥಳಾಂತರ ಮಾಡಲಾಗಿದೆ ಎಂದರೆ ಏನರ್ಥ?
ಇದೀಗ ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಪ್ರತಿಮೆ ಉದ್ಘಾಟನೆ ವೇಳೆ ಅದರ ಸೊಂಟದ ಮೇಲ್ಭಾಗದಲ್ಲಿ ಏನಿತ್ತು ಎಂಬ ಸತ್ಯ ಹೊರಬರಬೇಕಾಗಿದೆ. ಧಾರ್ಮಿಕ ಕೇಂದ್ರವೋ ಅಥವಾ ಪ್ರವಾಸಿ ತಾಣವೋ ಎಂಬುದನ್ನು ಅವರೇ ಸ್ಪಷ್ಟಪಡಿಸಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್‌ಕುಮಾರ್, ಅಂದಿನ ಮುಖ್ಯಮಂತ್ರಿಗಳು ಈ ಪಾರ್ಕ್ ಉದ್ಘಾಟನೆಗೂ ಮುನ್ನ ಸೂಕ್ತ ಮಾಹಿತಿ ಪಡೆಯಬೇಕಿತ್ತು ಎಂದರು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಪರಶುರಾಮನಿಗೆ ಅವಮಾನ ಮಾಡಿದೆ. ತರಾತುರಿಯಲ್ಲಿ ಪ್ರತಿಮೆಯನ್ನು ಏಕೆ ನಿರ್ಮಿಸಲಾಗಿದೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಕಾರ್ಕಳ
ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ – ಯುವತಿ ಕಂಡು ಬಂದಲ್ಲಿ ತಿಳಿಸುವಂತೆ ಪೊಲೀಸ್ ಪ್ರಕಟನೆ

ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರ ಹೋಗಿ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಖಾಸು ನಿವಾಸಿ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ದೀಪಾ (21) ಕಾಣೆಯಾದವರು. ಈಕೆ ನ. 6ರಂದು ಬೆಳಗ್ಗೆ ಕಾಲೇಜಿಗೆಂದು ಹೋದವಳು ಮನೆಗೆ ವಾಪಸ್ ಬಂದಿಲ್ಲ. ಆದ್ರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿದ್ದಳೆ
ಆಕೆಯನ್ನು ಸಂಬಂಧಿಕರ ಮನೆಯಲ್ಲೆಲ್ಲ ಹುಡುಕಾಡಿದ್ದು ಪತ್ತೆಯಾಗದ ಹಿನ್ನೆಲೆಯಲ್ಲಿ ನಾಪತ್ತೆ ಬಗ್ಗೆ ದೂರು ಸಲ್ಲಸಲಾಗಿದೆ. ನೀಲಿ ಬಣ್ಣದ ಚೂಡಿ ಧರಿಸಿದ್ದು, ಕಪ್ಪು ಬಿಳುಪು ಗೋಧಿ ಮೈಬಣ್ಣ ಕೋಲು ಮುಖದ ಚಹರೆ ಹೊಂದಿದ್ದಾಳೆ. ತಂಗಿ ನಾಪತ್ತೆಯಾಗಿರುವ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಈ ಚಹರೆಯ ಹುಡುಗಿ ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ
ಐದು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಕಾರ್ಕಳ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

ಉಡುಪಿ : 5 ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಕಾರ್ಕಳ ನಗರ ಠಾಣೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತ ಪಟ್ಟವರು. ಅವರ ಮೃತದೇಹ ಕಾರ್ಕಳದ ಲಕ್ಷ್ಮೀದೇವಿ ಕಲ್ಯಾಣ ಮಂಟಪ ಸಮೀಪ ಬಾವಿಯಲ್ಲಿ ಪತ್ತೆಯಾಗಿದೆ.
ಅಕ್ಟೋಬರ್ 19 ಕ್ಕೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೃತಿನ್ ಗಾಗಿ ಹುಡುಕಾಟ ನಡೆಸಿದ್ದರು.
2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ಟೋಬರ್ 16ರಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ತಿಳಿಸಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.
ಅ.18ರಂದು ವಾರದ ರಜೆ ಪಡೆದಿದ್ದ ಶೃತಿನ್ ಅ.19ರಂದು ಸಿಎಲ್ ಪಡೆದಿದ್ದರು. ಬಳಿಕ ನಾಪತ್ತೆಯಾಗಿದ್ದರು. ಮೃತ ದೇಹ ಸಿಕ್ಕ ಬಳಿಕ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾರ್ವಜನಿಕ ವಲಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಬಹುದಾಗಿದೆ.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?