ಉಡುಪಿ : ಜ 24 : ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.
ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸಂಜೆ ವೇಳೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಭೂಮಿ ನಟರಾದ ಇವರು, ಮಂದಾರ ಬೈಕಾಡಿ, ಭೂಮಿಕಾ ರಂಗ ತಂಡ ಹಾರಾಡಿ, ದುರ್ಗಾ ಕಲಾ ತಂಡ ಸೇರಿದಂತೆ ವಿವಿಧ ತಂಡಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಹಾಸ್ಯ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದರು. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ
