ಮಂಗಳೂರು: ಜ 28 : ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ. ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಜ 28 ಶನಿವಾರ ವರದಿಯಾಗಿದೆ
ಶೈಲಜಾ ರಾವ್ (64) ಎಂ ಹತ್ಯೆಯಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡಾತ. ದಿನೇಶ್ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೊಲೀಸ್ ಮೂಲಗಳು ತಿಳಿಸಿವೆ.
ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
