ಉಡುಪಿ: ನಡು ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಉಡುಪಿ – ಕಾರ್ಕಳ ರಸ್ತೆಯಲ್ಲಿ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯಲ್ಲೇ ಜಗಳ ನಡೆದಿದೆ.
ಬಸ್‌ಗೆ ಸೈಡ್ ಕೊಡುವ ವಿಚಾರದಲ್ಲಿ ಬಸ್ಸಿನ ಸಿಬಂದಿಗಳ ಮಧ್ಯೆ ಜಗಳ ಅರಂಭಗೊಂಡಿದೆ. ಬಳಿಕ ರಸ್ತೆ ಮಧ್ಯೆಯೇ ಬಸ್ ನಿಲ್ಲಿಸಿದ ಸರ್ಕಾರಿ ಬಸ್ ಚಾಲಕ ಹಾಗೂ ಖಾಸಗಿ ಬಸ್‌ನ ನಿರ್ವಾಹಕ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಈ ವೇಳೆ ಖಾಸಗಿ ಬಸ್ಸಿನ ನಿರ್ವಾಹಕ ಅವಾಚ್ಯ ಶಬ್ದಗಳಿಂದ ಸರ್ಕಾರಿ ಬಸ್ಸಿನ ಚಾಲಕನಿಗೆ ನಿಂದಿಸಿದ್ದಾನೆ. ಇದರಿಂದ ಕೋಪಗೊಂಡ ಚಾಲಕ ಸೈಯದ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾನೆ.
ಸದ್ಯ ಚಾಲಕ ಮತ್ತು ನಿರ್ವಾಹಕನ ಗಲಾಟೆಯನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ. ಸಿಟ್ಟಿನಲ್ಲಿ ಚಾಲಕ ತನ್ನ ಚಪ್ಪಲಿ ತೆಗೆದುಕೊಂಡು ಖಾಸಗಿ ಬಸ್ಸಿನ ನಿರ್ವಾಹಕನಿಗೆ ಹೊಡೆದಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಹಿಂದೆಯೂ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಬಸ್ ಹಾಗೂ ಖಾಸಗಿ ಬಸ್ಸಿನ ಸಿಬ್ಬಂದಿಗಳ ನಡುವೆ ಜಗಳ ನಡೆದಿದೆ.
ವೈರಲ್ ವಿಡಿಯೋ
ಉಡುಪಿ : ನಡು ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಸಿಬ್ಬಂದಿಗಳು – ವಿಡಿಯೋ ವೈರಲ್ pic.twitter.com/tCQyDbdm2j
— Nikhara News (@NewsNikhara) January 30, 2023