Ad Widget

ವಾಹನ ಮಾಲೀಕರಿಗೆ ಬಿಗ್ ಶಾಕ್!!!
ಎಪ್ರಿಲ್‌‌ನಿಂದ 15 ವರ್ಷಕ್ಕಿಂತ ಹಳೆಯ ವಾಹನಗಳ ಸಂಚಾರಕ್ಕೆ ನಿರ್ಬಂಧ

Picsart_23-01-31_13-03-54-800
Ad Widget

Ad Widget

Ad Widget

ನವದೆಹಲಿ, ಜ 31 : ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ ವಾಹನಗಳು ರಸ್ತೆಗೆ ಇಳಿಯುವಂತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಈ ಮಾಹಿತಿಯನ್ನು ತಿಳಿಸಿದರು.

Ad Widget

Ad Widget

Ad Widget

Ad Widget

ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಸೇರಿಕೊಂಡಿವೆ.15 ವರ್ಷಕ್ಕಿಂತ ಹಳೆಯದಾದ ಒಂಬತ್ತು ಲಕ್ಷಕ್ಕೂ ಹೆಚ್ಚು ಸರಕಾರಿ ವಾಹನಗಳನ್ನು ವಿಲೇವಾರಿ ಮಾಡಲು ಸರ್ಕಾರ ಈಗ ಅನುಮೋದನೆ ನೀಡಿದ್ದೇವೆ. ಹೊಸ ವಾಹನಗಳು ಹಳೆಯ ವಾಹನಗಳ ಬದಲಿಗೆ ರಸ್ತೆಗಿಳಿಯಲಿವೆ ಎಂದು ಹೇಳಿದರು.

Ad Widget

Ad Widget

Ad Widget

Ad Widget

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಏಪ್ರಿಲ್ 1 ರಿಂದ, 15 ವರ್ಷಕ್ಕಿಂತ ಹಳೆಯದಾದ ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಬಸ್‌ಗಳು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಡೆತನದ ಎಲ್ಲಾ ವಾಹನಗಳನ್ನು ನೋಂದಣಿ ರದ್ದುಗೊಳಿಸಲಾಗುತ್ತದೆ.

ಬಯೋ-ಸಿಎನ್‌ಜಿ,ಎಥೆನಾಲ್, ಮೆಥನಾಲ್, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮಾಲಿನ್ಯಕಾರಕ ಬಸ್‌ಗಳು ಮತ್ತು ಕಾರುಗಳು ರಸ್ತೆಗಿಳಿಯುತ್ತವೆ ಮತ್ತು ಪರ್ಯಾಯ ಇಂಧನ ಹೊಂದಿರುವ ಹೊಸ ವಾಹನಗಳು ಅವುಗಳನ್ನು ಬದಲಾಯಿಸುತ್ತವೆ. ಇದು ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: