Ad Widget

Amit shah : ಫೆ 11 :  ಹನುಮಗಿರಿ ಹಾಗೂ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

WhatsApp Image 2023-01-31 at 12.24.45
Ad Widget

Ad Widget

Ad Widget

ಪುತ್ತೂರು: ಜ 31 : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ ಜತೆಗೆ ಪುತ್ತೂರಿನ ಹೊರವಲಯದ ಈಶ್ವರಮಂಗಲದ ಹನುಮಗಿರಿಯ ಶಾಲೆಯೊಂದರಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ  ನಡೆಯುವ   ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ’ ಎನ್ನುವ ಬೃಹತ್‌  ಪ್ರದರ್ಶನ ಕಾರ್ಯಕ್ರಮಕ್ಕೂ ಅವರು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

Ad Widget

 ಅಲ್ಲದೇ ಪುತ್ತೂರಿನ  ತೆಂಕಿಲದಲ್ಲಿರುವ ವಿವೇಕಾನಂದ ನರೇಂದ್ರ ಕಾಲೇಜಿನಲ್ಲಿ  ಬೃಹತ್‌   ಕಾರ್ಯಕ್ರಮ ಆಯೋಜಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಪುತ್ತೂರು ತೆಂಕಿಲ ವಿವೇಕಾನಂದ ಶಾಲೆಯ ಆವರಣದಲ್ಲಿ ಈ ಬಗ್ಗೆ ಸೋಮವಾರ ಸಭೆ ನಡೆದಿದೆ. ಸಂಸದ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜಿಲ್ಲೆಯ ಶಕ್ತಿಕೇಂದ್ರದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಶಾ ಬೇಟಿಯನ್ನು ಖಚಿತ ಪಡಿಸಿದ್ದು, ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುತ್ತಿದೆ.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: