Ad Widget

Sudden Death ಬಂಟ್ವಾಳ : ಮರದ ಕೆತ್ತನೆ ಕೆಲಸದಲ್ಲಿ ತೊಡಗಿದ್ದ ಕುಶಲಕರ್ಮಿ ಕುಸಿದು ಬಿದ್ದು ಮೃತ್ಯು

WhatsApp Image 2023-02-01 at 11.30.47
Ad Widget

Ad Widget

Ad Widget

ಬಂಟ್ವಾಳ:  ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ ಮೃತಪಟ್ಟವರು.

Ad Widget

Ad Widget

Ad Widget

Ad Widget

ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: