Ad Widget

Mangalore Ganja Case | ಮಂಗಳೂರು ಹೈಪ್ರೋಫೈಲ್ ಗಾಂಜ ಕೇಸ್ : ಬಂಧಿತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೆಲವೇ ದಿನದಲ್ಲಿ ಜಾಮೀನು

WhatsApp Image 2023-01-11 at 15.42.04
Ad Widget

Ad Widget

ಮಂಗಳೂರು: ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದ ಹೈಫ್ರೋಫೈಲ್ ಕೇಸ್ ಆದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಗಾಂಜಾ ಪ್ರಕರಣದಲ್ಲಿ (Mangalore Ganja Case) ಭಾಗಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ.

Ad Widget

Ad Widget

Ad Widget

Ad Widget

ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Ad Widget

Ad Widget

Ad Widget

Ad Widget

13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಮಂಗಳವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Ad Widget

Leave a Reply

Recent Posts

error: Content is protected !!
%d bloggers like this: