ಪುತ್ತೂರು: ಫೆ 3 : ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.
ಪುತ್ತೂರು ನಗರದ ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಬೆಳಗ್ಗೆ 3.30ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಉಸಿರು ಎಳೆಯಲು ಕಷ್ಟ ಪಡಲು ಆರಂಭಿಸಿದ್ದರು. ತಕ್ಷಣ ಮನೆಯವರು ಅವರನ್ನು ಪುತ್ತೂರು ಆಸ್ಪತ್ರೆಗೆ ಕರದು ಕೊಂಡು ಹೋಗಿದ್ದಾರೆ. ಪರಿಕ್ಷೀಸಿದ ವೈದ್ಯರು ಆವರು ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿ ಎಂದು ತಿಳಿದು ಬಂದಿದೆ.
ಮೃತರು ಪತ್ನಿ , ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಹೇಶ್ ಅವರು ನಿನ್ನೆ ರಾತ್ರಿಯವರೆಗೂ ಆರೋಗ್ಯದಿಂದ ಇದ್ದರು ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹೃದಯಾಘಾತಗಳ ಸಂಖ್ಯೆ ವಿಪರೀತ ಹೆಚ್ಚಾಗಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
