ಉಡುಪಿ : ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ಯುವಕನೊಬ್ಬನನ್ನು ಡ್ರ್ಯಾಗರ್ ನಿಂದ ಇರಿದು ಕೊಲೆಗೈದ ಘಟನೆ ಇಂದು ಸಂಜೆ ನಡೆದಿದೆ.ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಹತ್ಯೆಗೀಡಾದ ಯುವಕ.
ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿಯೊಂದರಲ್ಲಿ ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರುಗಾಯಾಳು ಶರತ್ ಶೆಟ್ಟಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿದ್ದು, ಭೂ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಗಾಳದಲ್ಲಿ ನೇಮೋತ್ಸದಲ್ಲಿದ್ದ ಶರತ್ ಶೆಟ್ಟಿಯಲ್ಲಿ ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರಲು ಹೇಳಿದ ಇಬ್ಬರು ದುಷ್ಕರ್ಮಿಗಳು ಅಲ್ಲಿ ಬಂದ ಶೆಟ್ಟರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ