ಮಂಗಳೂರು, ಫೆ 6 : ಮಂಗಳೂರು ನಗರದ ಹಾಸ್ಟೆಲೊಂದರ ನೂರರಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಫೆ 6 ರಂದು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಸೇವಿಸಿದ ಅಹಾರ ಪುಡ್ ಪಾಯಿಜನ್ ಆದುದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಮಂಗಳೂರಿನ ಹೊರವಲಯ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ಅಸ್ವಸ್ಥಗೊಂಡವರು. ಒಟ್ಟು 89 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ಇಂದು ಮುಂಜಾನೆಯಿಂದ ಈ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ತಕ್ಷಣವೇ ವಿದ್ಯಾರ್ಥಿಗಳನ್ನು ಆಸ್ಫತ್ರೆಗೆ ಸಾಗಿಸದೇ ಅಡಳಿತ ಮಂಡಳಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿ ಬಂದಿದೆ.
ಮಂಗಳೂರಿನ ಸಿಟಿ ಆಸ್ಫತ್ರೆ, ಎಜೆ ಹಾಸ್ಪಿಟಲ್ ಕೆಎಂಸಿ ಆಸ್ಫತ್ರೆಗಳಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆಇದೀಗ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
.