Connect with us

ದಕ್ಷಿಣ ಕನ್ನಡ

Gas Leakage | ಸುಬ್ರಹ್ಮಣ್ಯ ರೋಡ್ : ಗೂಡ್ಸ್ ರೈಲಿನಲ್ಲಿ ಗ್ಯಾಸ್ ಸೋರಿಕೆ ..? ಎಮರ್ಜೆನ್ಸಿ ರೆಸ್ಪಾನ್ಸ್ ತಂಡ ಆಗಮನ

Ad Widget

Ad Widget

Ad Widget

Ad Widget Ad Widget

ಕಡಬ, ಫೆ.09. ರೈಲಿನಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ (Gas Leakage) ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ನೆಟ್ಟಾಣ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.

Ad Widget

Ad Widget

ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ‌.

Ad Widget

Ad Widget
Click to comment

Leave a Reply

ಮಂಗಳೂರು

Congress roadshow-ಪಂಪ್’ವೆಲ್’ನಿಂದ ಕಣ್ಣೂರುವರೆಗೆ ಸಾಗಿದ ಕಾಂಗ್ರೆಸ್ ರೋಡ್ ಶೋ

Ad Widget

Ad Widget

Ad Widget

Ad Widget Ad Widget

ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು.

Ad Widget

Ad Widget

Ad Widget

Ad Widget

Ad Widget

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Ad Widget

Ad Widget

ಗರೋಡಿ, ದರ್ಗಾ ಭೇಟಿ:
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್’ಗೆ ಭೇಟಿ ನೀಡಿದರು.

Ad Widget

Ad Widget

ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬುಧವಾರ ಸಂಜೆ ಉರ್ವ, ಬಂದರು ಪ್ರದೇಶದಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು.

Ad Widget

Ad Widget

ತೆರೆದ ವಾಹನದ ಮುಂಭಾಗದಿಂದ ಸಾಗುತ್ತಿದ್ದ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಾಸಿಕ್ ಬ್ಯಾಂಡ್ ಸದ್ದು ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿತು.

Continue Reading

ರಾಜಕೀಯ

Belthangady-ಬೆಳ್ತಂಗಡಿ : ಸಿಗದ ಮೂಲಭೂತ ಸೌಕರ್ಯ – ನೋಟಾಗೆ ಮತ ಚಲಾಯಿಸಲು ಮಲೆಕುಡಿಯ ಸಮುದಾಯದ ನಿರ್ಧಾರ

Ad Widget

Ad Widget

Ad Widget

Ad Widget Ad Widget

ಬೆಳ್ತಂಗಡಿ: ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ತಾಲೂಕಿನ ನಾವೂರು ಗ್ರಾಮದ ಮೂಲ ನಿವಾಸಿ ಮಲೆಕುಡಿಯ ಸಮುದಾಯದವರು ತಮನ್ನು ಎಲ್ಲ ರಾಜಕೀಯ ಪಕ್ಷಗಳೂ ವಂಚಿಸುತ್ತಿದ್ದಾರೆ ಎಂದು ಆರೋಪಿಸಿ ಈ ಬಾರಿ ನೋಟ ಚಲಾಯಿಸಲು ನಿರ್ಧರಿಸಿದ್ದು ಈ ಬಗ್ಗೆ ತಮ್ಮ ಗ್ರಾಮದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ, ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ನೋಟಾ ಮತವನ್ನು ಚಲಾಯಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳು ಈ ಪರಿಸರದಲ್ಲಿ ಜೀವನ ನಡೆಸುತ್ತಿದ್ದು ಸುಮಾರು 100 ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ.

Ad Widget

Ad Widget

ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ಗ್ರಾಮಪಂಚಾಯತಿನಿಂದ ಆರಂಭಿಸಿ ಪ್ರಧಾನಿಯವರೆಗೆ ಎಲ್ಲರಿಗೂ ಇಲ್ಲಿನ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ. ತಮ್ಮ ಬೇಡಿಕೆಗಳಿಗೆ ಯಾವ ರಾಜಕೀಯ ಪಕ್ಷಗಳೂ ಸರಕಾರಗಳೂ ಸ್ಪಂದಿಸಲಿಲ್ಲ ಎಂಬುದು ಇಲ್ಲಿನ ಜನರ ಆರೋಪವಾಗಿದೆ. ಪುಳಿತ್ತಡಿ ಪರಿಸರದಲ್ಲಿ ಇನ್ನೂ ಕರೆಂಟ್ ಬಂದಿಲ್ಲ ಆದರೆ ಅವರ ಮನೆಗಳಲ್ಲೆಲ್ಲ ವಿದ್ಯುತ್ ಮೀಟರ್ ಅಳವಡಿಸಲಾಗಿದೆ.

Ad Widget

Ad Widget

2017ರ ವೇಳೆಗೆ ಏಕಾಏಕಿ ಗುತ್ತಿಗೆದಾರರು ಬಂದು ಇವರ ಮನೆಗಳಿಗೆ ಮೀಟರ್ ಅಳವಡಿಸಿದ್ದರು. ಮೀಟರ್ ಅಳವಡಿಸಿ ಆರು ವರ್ಷಗಳೇ ಕಳೆದಿದೆ ಎನ್ನುತ್ತಾರೆ ಇಲ್ಲಿನ ಜನರು. ಆದರೆ ಮತ್ತೆ ಯಾರೂ ಇತ್ತ ತಿರುಗಿ ನೋಡಿಲ್ಲ. ಅರಣ್ಯದ ನಡುವೆ ವಾಸಿಸುತ್ತಿರುವ ಈ ಜನರಿಗೆ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಕತ್ತಲಾದ ಮೇಲೆ ಇವರ ಬದುಕೇ ದುಸ್ತರ, ಕೃಷಿಗೆ ನೀರುಣಿಸಲೂ ಸಾಧ್ಯವಾಗದೆ ಇವರು ಸಂಕಷ್ಟದಲ್ಲಿದ್ದಾರೆ.

Ad Widget

Ad Widget

ಮೆಸ್ಕಾಂ ಅಧಿಕಾರಿಗಳು ಇಲ್ಲಿಗೆ ವಿದ್ಯುತ್ ಒದಗಿಸಲು ಈ ಬಗ್ಗೆ ಸರ್ವೆ ನಡೆಸಿದ್ದು 2017ರಲ್ಲಿ 46,81,398 ರೂಗಳ ಅಂದಾಜುಪಟ್ಟಿ ತಯಾರಿಸಿದ್ದರು. ಇದಕ್ಕೆ ಅರಣ್ಯ ಇಲಾಖೆಯ ಅನುಮೋದನೆ ಪಡೆಯಲು ನಿಗದಿತ ನಮುನೆಯಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದೆ. ಆದರೆ ಈ ಆನ್ ಲೈನ್ ಅರ್ಜಿ ಏನಾಗಿದೆ ಎಂಬುದು ಮಾತ್ರ ಯಾರಿಗೂ ತಿಳಿದಿಲ್ಲ.

Continue Reading

ಮಂಗಳೂರು

Janardhana Poojary-ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ- ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಪದ್ಮರಾಜ್ ಆರ್ ಪೂಜಾರಿಯನ್ನು ಗೆಲ್ಲಿಸುವ ಮೂಲಕ ಆಗಬೇಕಿದೆ :ಜನಾರ್ದನ ಪೂಜಾರಿ

Ad Widget

Ad Widget

Ad Widget

Ad Widget Ad Widget

ದೈವ-ದೇವರ ನಾಡಾಗಿರುವ ಈ ತುಳುನಾಡು ದೇವರು, ದೇವಾಲಯಗಳನ್ನೊಳಗೊಂಡ ಸತ್ಯ, ಧರ್ಮ, ನಿಷ್ಠೆಗೆ ಪ್ರಾಮುಖ್ಯವನ್ನು ನೀಡುವ ನಾಡಾಗಿದೆ. ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊಣೆಗಾಣಿಸಿ, ಸತ್ಯ, ಧರ್ಮ, ಸೌಹಾರ್ದಕ್ಕೆ ಗೆಲುವು ಆಗಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅಂಟಿಕೊಂಡ ಮತೀಯ ಸೂಕ್ಷ್ಮ ಎಂಬ ಹಣೆಪಟ್ಟಿ ಹೋಗಬೇಕು. ಅಪಪ್ರಚಾರವನ್ನು ಮೆಟ್ಟಿ ನಿಂತು, ಜನರು ಸತ್ಯ – ಧರ್ಮವನ್ನು ಗೆಲ್ಲಿಸಬೇಕಿದೆ.

Ad Widget

Ad Widget

Ad Widget

Ad Widget

Ad Widget

ಹಿಂದೂ ಅಂದರೆ ಮಾನವೀಯತೆಯ ಧರ್ಮ, ಮಾನವೀಯತೆಗಿಂತಲೂ ಮಿಗಿಲಾದ ಧರ್ಮವಿಲ್ಲ. ಪದ್ಮರಾಜ್ ಇದನ್ನು ಚೆನ್ನಾಗಿ ಪಾಲನೆ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿನ ಮೂಲಕ ಜನತೆಯ ಅಭಿವೃದ್ಧಿಯ ಕನಸಿಗೆ ಚೈತನ್ಯ ಸಿಗಬೇಕು. ನನ್ನ ಶಿಷ್ಯನ ಗೆಲುವನ್ನು ಕಣ್ಣಾರೆ ನೋಡಬೇಕು ಎಂದು ಹಿರಿಯ ಕಾಂಗ್ರೆಸಿಗ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

Ad Widget

Ad Widget

ಈ ಲೋಕಸಭಾ ಚುನಾವಣೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರಗಳು, ಬೀಚ್, ಪಶ್ಚಿಮಘಟ್ಟ ಇತ್ಯಾದಿ ಪ್ರವಾಸೋದ್ಯಮದ ನೈಸರ್ಗಿಕ ಸೌಂದರ್ಯದ ದ.ಕ. ಜಿಲ್ಲೆ ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿರಬೇಕಿತ್ತು. ಇನ್ನೂ ಕಾಲ ಮಿಂಚಿಲ್ಲ, ಜನರು ಅಭಿವೃದ್ಧಿಗಾಗಿ ಬೆಂಬಲಿಸಬೇಕು ಎಂದು ಹೇಳಿದರು.

Ad Widget

Ad Widget

ಭೂಮಿ ಒಡೆತನ ನೀಡಿದ್ದು ಕಾಂಗ್ರೆಸ್
ದ.ಕ. ಜಿಲ್ಲೆಗೆ ಬಂದರು, ವಿಮಾನಯಾನ, ರೈಲು, ರಸ್ತೆ ಸಾರಿಗೆ ನೀಡಿದ್ದು ಕೇಂದ್ರದ ಕಾಂಗ್ರೆಸ್ ಸರ್ಕಾರ. ಭೂಮಸೂದೆ ಜಾರಿ ಮೂಲಕ ನಾಡಿನ ಶೇ.80ರಷ್ಟು ಮಂದಿ ಭೂಮಿಯ ಒಡೆಯರಾದರು. 70 ವರ್ಷಗಳಲ್ಲಿ ಏನಾಗಿದೆ ಕೇಳುವವರು ಕಳೆದ 33 ವರ್ಷಗಳಲ್ಲಿ ಜನರಿಗೆ ಏನಾದರೂ ಕೊಡುಗೆ ಸಿಕ್ಕಿದ್ದರೆ ಹೇಳಲಿ ಎಂದರು. ಕಾಂಗ್ರೆಸ್
ಮಾಡಿದ ಅಭಿವೃದ್ಧಿ ಈ ಜಿಲ್ಲೆಯಲ್ಲಿಯೇ ಶಾಶ್ವತವಾಗಿ ನಮ್ಮ ಕಣ್ಣ ಮುಂದಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget

ಅಭಿವೃದ್ಧಿಗೆ ಚೈತನ್ಯ ಸಿಗಬೇಕು ಎಂದ ಕೇಂದ್ರ ಮಾಜಿ ಸಚಿವ
ಮೋದಿ ಅಲೆ ಎನ್ನುವಂಥದ್ದು ಭ್ರಮೆ. 10 ವರ್ಷಗಳ ಹಿಂದೆ ನೀಡಿದ ಭರವಸೆಗಳಲ್ಲಿ ಒಂದೂ ಈಡೇರಿಸಿಲ್ಲ. ನನ್ನ ಸಾಲ ಮೇಳದಂತಹ ಒಂದು ಯೋಜನೆ ಮೋದಿ ಕೊಟ್ಟಿದ್ದಾರಾ? ಅಭಿವೃದ್ಧಿ ಅಂದರೆ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನವಲ್ಲ, ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವಂತಾಗಬೇಕು ಎಂದರು.

ಹಿಂದುತ್ವದ ಅಮಲಿನಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯದ ಯುವಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಮೇಲ್ವರ್ಗದವರು ಅಧಿಕಾರ ನಡೆಸುತ್ತಿದ್ದಾರೆ. ಇದಕ್ಕೆಲ್ಲ ತಿಲಾಂಜಲಿ ನೀಡುವ ಕೆಲಸ ಆಗಬೇಕಿದೆ. ಯುವ ಸಮುದಾಯಕ್ಕೆ ಕೆಲಸ ನೀಡಿ ಮುನ್ನಡೆಸುವ ಕೆಲಸ ಮಾಡಬೇಕು. ನಾರಾಯಣ ಗುರುಗಳು, ವಿವೇಕಾನಂದರ ತತ್ವ ಚಿಂತನೆಯನ್ನು ಇಂದಿನ ಯುವ ಸಮಾಜ ಅರ್ಥೈಸಿಕೊಳ್ಳಬೇಕು ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading