ಮಂಗಳೂರು: ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು ಹಿಂದೂ ಸಂಘಟನೆಯ ಕಾರ್ಯಕರ್ತರು ಎಂದು ಹೇಳಲಾಗಿದೆ. ಕದ್ರಿ ಪಾರ್ಕ್ ಗೆ ಉತ್ತರ ಕರ್ನಾಟಕ ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಆಗಮಿಸಿದ್ದರು. ಇದನ್ನು ಗಮನಿಸಿದ ಸಂಘಟನೆಗೆ ಸೇರಿದ ಆರೋಪಿ ಯುವಕರು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಹಲ್ಲೆಗೊಳಗಾದ ಜೋಡಿಯೂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.