Ad Widget

ನೇಮೋತ್ಸವದಲ್ಲಿದ್ದಾಗಲೇ ಹೊರ ಕರೆದು ಕೊಲೆ : ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಶರತ್ ಶೆಟ್ಟಿ ಕುಟುಂಬ

Screenshot_20230205-220102_Gallery
Ad Widget

Ad Widget

Ad Widget

ಕಾಪು, ಫೆ 12 : ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್‌ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.

Ad Widget

Ad Widget

Ad Widget

Ad Widget

ಶರತ್‌ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು.

Ad Widget

Ad Widget

Ad Widget

Ad Widget

ಇನ್ನು ಶರತ್‌ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಉಡುಪಿ ಎಸ್ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್‌ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಶರತ್‌ ಶೆಟ್ಟಿ ಅವರ ಭಾವ ಚಂದ್ರಹಾಸ ಶೆಟ್ಟಿ ಮಂಡೇಡಿ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ.

Ad Widget

Ad Widget
Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: