ಕಾಸರಗೋಡು, ಫೆ.13: ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ ಫೆ.13 ರಿಂದ 17ರ ವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಮಠದ ಯತಿಗಳಾದ ಶ್ರೀ ಶ್ರೀ ಸಚ್ಚದಾನಂದ ಭಾರತೀ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಡೆದು ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವ ಫೆ.13 ರಿಂದ 17ರವರೆಗೆ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಭಾಗವಹಿಸಿ ಶ್ರೀದೇವರ ಹಾಗೂ ಗುರುಗಳ ಕೃಪೆಗೆ ಪಾತ್ರಾಗಬೇಕೆಂದು ಮಠದ ಮ್ಯಾನೇಜರ್ ಹಾಗೂ ಉತ್ಸವ ಸಮಿತಿಯವರು ತಿಳಿಸಿದ್ದಾರೆ.



