ಬೆಂಗಳೂರು: ಜನರ ಮೇಲೆ ಆನೆ ದಾಳಿಯ ವಿಚಾರವಾಗಿ ಕೆಲವು ತಿಂಗಳ ಹಿಂದೆ ಗ್ರಾಮಸ್ಥರಿಂದ ಹಲ್ಲೆಗೆ ಒಳಗಾಗಿ ಸುದ್ದಿಯಾಗಿದ್ದ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ (MP Kumaraswamy) ಅವರಿಗೆ ಈಗ ಚೆಕ್ ಬೌನ್ಸ್ (cheque bounce) ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಆದೇಶ ನೀಡಿದ್ದು, ಒಟ್ಟು ಎಂಟು ಪ್ರಕರಣಗಳಲ್ಲಿ 1 ಕೋಟಿ 38 ಲಕ್ಷದ 65 ಸಾವಿರ ರೂಪಾಯಿ ಪಾವತಿಸುವಂತೆ ಸೂಚಿಸಿದೆ.
ನಿಗದಿ ಮೊತ್ತ ಪಾವತಿಸದಿದ್ದರೆ ತಲಾ ಆರು ತಿಂಗಳು ಜೈಲು ಶಿಕ್ಷಗೆ ಗುರಿಯಾಬೇಕಾಗುತ್ತದೆ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಹಣ ಪಾವತಿಯಾಗದಿದ್ದರೆ ಎಂಟು ಪ್ರಕರಣಗಳಿಂದ ಎಂ.ಪಿ.ಕುಮಾರಸ್ವಾಮಿ ಅವರು ಒಟ್ಟು ನಾಲ್ಕು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.