ಮೊರಾದಾಬಾದ್: ಶನಿವಾರ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಬಿಜೆಪಿ ಸದಸ್ಯನೊಬ್ಬ ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ವಾದವಿವಾದದ ನಂತರ ಗುಂಡು ಹಾರಿಸಿದ್ದಾನೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇವರ ಗಲಾಟೆಗೆ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ನೀಡಿದ್ದ ಹೇಳಿಕೆಯ (Mohan Bhagwat Statement) ವಾಗ್ವಾದ ಕಾರಣ ಎನ್ನಲಾಗಿದೆ.
ಆರೋಪಿ ರಜತ್ ಶರ್ಮಾ ಭಾರತೀಯ ಜನತಾ ಪಕ್ಷದ ಸದಸ್ಯ ಎಂದು ವರದಿಯಾಗಿದೆ. ಶರ್ಮಾ ಫೆಬ್ರವರಿ 8 ರಂದು ಬ್ರಾಹ್ಮಣರ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ್ದ ಹೇಳಿಕೆ ವಿರುದ್ಧ ಬ್ರಾಹ್ಮಣ ಮಹಾಸಭಾದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನಲಾಗಿದೆ.
ವಿಎಚ್‌ಪಿ ನಾಯಕ ಸಂತೋಷ್ ಪಂಡಿತ್ ಅವರು ಶರ್ಮಾ ಅವರ “ಪಕ್ಷದ ನಾಯಕತ್ವದ ವಿರುದ್ಧ ಹೆಜ್ಜೆ” ಗಾಗಿ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದರು. ಈ ಕುರಿತ ಅವರ ಬೇಡಿಕೆಯನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು ಎಂದು ಪತ್ರಿಕೆ ವರದಿ ಮಾಡಿದೆ.
ಶನಿವಾರ ಸಂಜೆ ಪಂಡಿತ್ ಮತ್ತು ಶರ್ಮಾ ನಡುವೆ ವಾಗ್ವಾದ ನಡೆದಿದ್ದು, ವಿಎಚ್‌ಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.
“ತಮ್ಮ ಹೇಳಿಕೆಯಲ್ಲಿ ರಜತ್ ಶರ್ಮಾ ತನ್ನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪಂಡಿತ್ ಹೇಳಿಕೊಂಡಿದ್ದಾನೆ” ಎಂದು ಮೊರಾದಾಬಾದ್ ಹಿರಿಯ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
“ಶರ್ಮಾ ಮತ್ತು ಪಂಡಿತ್ ಇಬ್ಬರೂ ಒಬ್ಬರಿಗೊಬ್ಬರು ತಿಳಿದಿದ್ದರು ಮತ್ತು ಆರೋಪಿಗಳು ಕೆಲವು ವಿಷಯದ ಬಗ್ಗೆ ಚರ್ಚಿಸಿ ಹಲ್ಲೆ ನಡೆಸಿದರು. ಶರ್ಮಾ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಪಂಡಿತ್‌ಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಗುಂಡು ಯಾವುದೇ ಪ್ರಮುಖ ಅಂಗಗಳಿಗೆ ಹಾನಿ ಮಾಡಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭಾಗವತ್ ಹೇಳಿದ್ದೇನು..?
ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ, ನಮ್ಮ ಸೃಷ್ಟಿಕರ್ತನಿಗೆ ನಾವೆಲ್ಲರೂ ಸಮಾನರು. ಯಾವುದೇ ಜಾತಿ, ಪಂಥ, ಮತಗಳನ್ನು ಆತ ಸೃಷ್ಟಿಸಲಿಲ್ಲ. ಈ ಎಲ್ಲವೂಗಳನ್ನು ಸೃಷ್ಟಿಸಿದ್ದು ಪುರೋಹಿತರು ಎಂದು ಹೇಳಿದ್ದಾರೆ. ಅದಲ್ಲದೇ, ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಎಂದು ಭಾಗವತ್ ಹೇಳಿದ್ದಾರೆ.
ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಮುಂಬೈನ ರವೀಂದ್ರ ನಾಟ್ಯ ಮಂದಿರದಲ್ಲಿ ಆಯೋಜಿಸಿದ್ದ ಸಂತ ಶಿರೋಮಣಿ ರೋಹಿದಾಸರ 647ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸೃಷ್ಟಿಕರ್ತ ದೇವರಿಗೆ ನಾವೆಲ್ಲರೂ ಸಮಾನರು. ಯಾವುದೇ ಜಾತಿ, ಪಂಥ, ಮತಗಳನ್ನು ಆತ ಸೃಷ್ಟಿಸಲಿಲ್ಲ.
ವ್ಯಕ್ತಿಯ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ. ಇಲ್ಲಿ ಎಲ್ಲರೂ ಒಂದೇ ಮತ್ತು ಯಾರು ಬೇರೆಯಲ್ಲ ಎಂದು ಹೇಳಿದರು.
ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಮತ್ತು ಯಾರ ನಡುವೆಯೂ ಯಾವುದೇ ವ್ಯತ್ಯಾಸಗಳಿಲ್ಲ, ಶಾಸ್ತ್ರದ ಆಧಾರದ ಮೇಲೆ ಕೆಲವು ಪಂಡಿತರು ಹೇಳುವುದು ಸುಳ್ಳು.
ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದು ಮೋಹನ್ ಭಾಗವತ್ ಕರೆ ನೀಡಿದರು.
ಮೋಹನ್ ಭಾಗವತ್ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ