Leopard | ಕಟೀಲು: ಬಾವಿಗೆ ಬಿದ್ದಿದ್ದ ಚಿರತೆಯನ್ನು ಬಾವಿಗಿಳಿದು ರಕ್ಷಿಸಿದ ಪಶುವೈದ್ಯೆ – ಕಾರ್ಯಚರಣೆಯ ವಿಡಿಯೋ ವೀಕ್ಷಿಸಿ

IMG-20230214-WA0076
Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು (Leopard) ಪಶುವೈದ್ಯೆ ಡಾ. ಮೇಘನಾ ಬಾವಿಗೆ ಇಳಿದು ರಕ್ಷಿಸಿದ್ದಾರೆ.

Ad Widget

ಚಿರತೆ ಶನಿವಾರ ಬಾವಿಗೆ ಬಿದ್ದಿತ್ತು. ಬಾವಿಗೆ ಬೋನನ್ನು ಇಳಿಸಿ, ಅದರೊಳಗೆ ಚಿರತೆ ಹೋಗುವಂತೆ ಮಾಡಿ ಅದನ್ನು ಹಿಡಿದು ರಕ್ಷಣೆ ಮಾಡಲು ಅರಣ್ಯ ಇಲಾಖೆಯವರು ದಿನವಿಡೀ ಪ್ರಯತ್ನಿಸಿದ್ದರು.

Ad Widget

Ad Widget

ಆದರೆ, ಈ ಪ್ರಯತ್ನ ಫಲಪ್ರದ ಆಗಿರಲಿಲ್ಲ. ಬಳಿಕ ಚಿರತೆ ರಕ್ಷಣಾ ಕಾರ್ಯಕ್ಕೆ ವನ್ಯಜೀವಿ ರಕ್ಷಣಾ ಕಾರ್ಯದಲ್ಲಿ ಪಳಗಿರುವ ಪಶುವೈದ್ಯರ ಮೊರೆ ಹೋಗಲಾಗಿತ್ತು.

Ad Widget

ಭಾನುವಾರ ಕಾರ್ಯಾಚರಣೆ ನಡೆಸಿದ ಪಶುವೈದ್ಯರ ತಂಡವು ಬಾವಿಯಲ್ಲೇ ಚಿರತೆಯ ಸ್ಮೃತಿ ತಪ್ಪಿಸಿ, ಬಳಿಕ ಬೋನಿನ ಮೂಲಕ ಅದನ್ನು ಮೇಲಕ್ಕೆತ್ತುವ ಕಾರ್ಯತಂತ್ರ ರೂಪಿಸಿತು. ಆದರೆ, ಬಾವಿಯು ಸಾಕಷ್ಟು ಆಳ ಇತ್ತು ಹಾಗೂ ಬಾವಿಯ ತಳ ಭಾಗದಲ್ಲಿ ಚಿರತೆ ಅಡಗಿ ಕುಳಿತಿತ್ತು. ಹಾಗಾಗಿ ಅದಕ್ಕೆ‌ ಅರಿವಳಿಕೆ ಚುಚ್ಚುಮದ್ದು ನೀಡುವುದು ಸುಲಭವಾಗಿರಲಿಲ್ಲ.

Ad Widget

Ad Widget

ಪಶುವೈದ್ಯೆ ಡಾ. ಮೇಘನಾ ಅವರನ್ನು ಬೋನಿನಲ್ಲಿ ಬಾವಿಯೊಳಗೆ ಇಳಿಸಿ, ಅಲ್ಲೇ ಅವರು ಚಿರತೆಗೆ ಅರಿವಳಿಕೆ ಮದ್ದು ನೀಡಲು ನಿರ್ಧರಿಸಲಾಯಿತು.

ಅರಿವಳಿಕೆ ಮದ್ದು ಹಾರಿಸುವ ಕೋವಿಯೊಂದಿಗೆ ಬೋನು ಸೇರಿದ ಡಾ.ಮೇಘನಾ ಅವರನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹಗ್ಗಗಳ‌ ನೆರವಿನಿಂದ ಬಾವಿಯೊಳಕ್ಕೆ ನಿಧಾನವಾಗಿ ಇಳಿಸಿದರು. ಡಾ.ಮೇಘನಾ ಅವರು ಚಿರತೆಯ ಸಮೀಪಕ್ಕೆ ಸಾಗಿ, ಅದರತ್ತ ಅರಿವಳಿಕೆ ಚುಚ್ಚುಮದ್ದು ಹಾರಿಸಿದರು. ಚಿರತೆ ಸಂಪೂರ್ಣ ಸ್ಮೃತಿ ತಪ್ಪಿರುವುದನ್ನು ಖಾತರಿಪಡಿಸಿಕೊಂಡ ಬಳಿಕ, ಮತ್ತೊಂದು ಸಿಬ್ಬಂದಿ ಸಹಾಯದಿಂದ ಚಿರತೆಯನ್ನು ತಾವಿದ್ದ ಬೋನಿನೊಳಕ್ಕೆ ಹಾಕಿದರು.


ಚಿರತೆ ಹಾಗೂ ಡಾ.ಮೇಘನಾ ಅವರಿದ್ದ ಬೋನನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮೇಲಕ್ಕೆತ್ತಿದರು.

ರಕ್ಷಣೆ ಮಾಡಿದ ಚಿರತೆಯು ಸುಮಾರು ಒಂದು ವರ್ಷ ಪ್ರಾಯದ್ದು. ಅದನ್ನು ಸುರಕ್ಷಿತ ವಾಗಿ ಮತ್ತೆ ಕಾಡಿಗೆ ಬಿಡಲಾಗಿದೆ.
ಈ ಕಾರ್ಯಾಚರಣೆಗೆ ಪಶುವೈದ್ಯರಾದ ಡಾ.ಯಶಸ್ವಿ ನಾರಾವಿ, ಡಾ.ಪೃಥ್ವಿ ಹಾಗೂ ಡಾ.ನಫೀಸಾ
ನೆರವಾದರು.

Leave a Reply

Recent Posts

error: Content is protected !!
%d bloggers like this: