ವಿಟ್ಲ: ಖಾಸಗಿ ಶಾಲೆಯೊಂದರ ವಿಧ್ಯಾರ್ಥಿಗಳು ಮುಸಲ್ಮಾನ ಸಂಘಟನೆಯೊಂದು ಆಯೋಜಿಸಿದ ಶೈಕ್ಷಣಿಕ ಕಾರ್ಯಾಗಾರದಲ್ಲಿ, ಭಾಗಿಯಾದ ಘಟನೆಯೂ ವಿವಾದದ ಸ್ವರೂಪ ಪಡೆದು ಪ್ರಕರಣ ದಾಖಲಾದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ಫೆ 18 ರಂದು ನಡೆದಿದೆ.
ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ರಾಜಕಮಲ್ ಎಂಬ ಖಾಸಗಿ ಹಾಲ್‌ಗೆ ಕರೆಸಿಕೊಂಡು ಅಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಾಕಾರಿ ಭಾಷಣ ಮಾಡಿ ವಿಧ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಠಾಣೆ ದೂರು ನೀಡಿದ್ದು, ಶಾಲೆಯ ಮುಖ್ಯೋಪಾಧ್ಯಯರ ಸಹಿತ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನತಾ ವಿದ್ಯಾ ಸಂಸ್ಥೆಯ ಮುಖ್ಯೋಪಾದ್ಯಯರಾದ ಟಿ ಆರ್ ನಾಯಕ್ , ರಫೀಕ್ ಮಾಸ್ಟರ್ ಆತೂರ್ ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯಷನ್ ಸಂಘಟನಾಕಾರರು ಆರೋಪಿಗಳಾಗಿದ್ದು , ಅವರ ವಿರುದ್ದ ಐಪಿಸಿ ಕಲಂ: 505 (2) ಜೊತೆಗೆ 34 ರಂತೆ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ನೆಕ್ಕರೆ ಮನೆ ನಿವಾಸಿ ಮಾಧವ ಮೂಲ್ಯ ಎಂಬವರು ದೂರುದಾರರು.

ಏನಿದು ಪ್ರಕರಣ ?
ಫೆ 18 ರಂದು ನುಸ್ತುತುಲ್ ಇಸ್ಲಾಮಿಕ್ ಯಂಗ್ ಮೆನ್ಸ್ ಅಸೋಸಿಯೇಷನ್ (NIA) ವತಿಯಿಂದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರ ನಡೆದಿತ್ತು. ಇದಕ್ಕೆ ಅಡ್ಯನಡ್ಕ ಜನತಾ ಹೈಸ್ಕೂಲ್ ನ ವಿದ್ಯಾರ್ಥಿಗಳು ತೆರಳಿದ್ದರು. ಇದರಲ್ಲಿ ಇಸ್ಲಾಂ ಮತದ ಬಗ್ಗೆ ಪ್ರವಚನ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಹಿಂದೂ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ . ಈ ಬಗೆಗಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,
. ಇದಾದ ಬಳಿಕ ವಿಟ್ಲ ಠಾಣೆಗೆ ತೆರಳಿದ ಬಿಜೆಪಿ ಹಾಗೂ ಹಿಂದೂ ಮುಖಂಡರು ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ಭೇಟಿಯಾಗಿ, ವಿದ್ಯಾರ್ಥಿಗಳನ್ನು ಮಾಹಿತಿ ಕಾರ್ಯಾಗಾರಕ್ಕೆ ಕಳುಹಿಸಿ ಮಕ್ಕಳ ಹಾದಿ ತಪ್ಪಿಸುತ್ತಿರುವ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಟ್ಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ದಯಾನಂದ ಉಜಿರೆಮಾರ್, ಶ್ರೀಕೃಷ್ಣ ವಿಟ್ಲ, ಅಕ್ಷಯ್ ರಜಪೂತ್, ಗಣೇಶ್ ಅಡ್ಯನಡ್ಕ, ಹರಿಪ್ರಸಾದ್ ಯಾದವ್, ಕೇವು ಗ್ರಾಮಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಮಾಜಿ ಅಧ್ಯಕ್ಷ ತಾರಾನಾಥ್ ಆಳ್ವ, ಪುರುಷೋತ್ತಮ ಕಲ್ಲಂಗಳ, ಉಪಾಧ್ಯಕ್ಷ ರಾಘವ ಮಣಿಯಾಣಿ ಸೇರಿದಂತೆ ಹಲವು ಕಾರ್ಯಕರ್ತರು ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತಕತೆ ನಡೆಸಿದರು.
ದೂರು ನೀಡಿದ ಬಳಿಕವು ಪೊಲೀಸರು ಪ್ರಕರಣ ದಾಖಲಿಸಿಲ್ಲ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ಠಾಣೆಯ ಮುಂಭಾಗ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರುರವರು ಆಗಮಿಸದ ಹಿನ್ನೆಲೆಯಲ್ಲಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಿಲ್ಲಾಧಿಕಾರಿಯವರ ಬಳಿ ಮಾತನಾಡುವುದಾಗಿ ತಿಳಿಸಿರುವುದಾಗಿ ಮಾಹಿತಿ ಲಭಿಸಿದೆ. ಇದಾದ ಬಳಿಕ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು ವಿನಃ ಅದರಲ್ಲಿ ಯಾವುದೇ ದುರುದ್ದೇಶವಿಲ್ಲ
ಸಂಘಟಕರ ಮಾಧ್ಯಮ ಪ್ರತಿಕ್ರಿಯೆ
ಪ್ರಾಂಶುಪಾಲರ ನಿರ್ದೇಶನದಂತೆ ಅಲ್ಲಿಗೆ ತೆರಳಿದ ವಿದ್ಯಾರ್ಥಿಗಳಿಗೆ ಅಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಹಿಂದೂ ಜಾಗರಣ ವೇದಿಕೆಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ
ಹಿಂದೂ ಸಂಘಟನೆ ಪ್ರಮುಖರು