ಬೆಂಗಳೂರು; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಟಾಪಟಿ ( Roopa vs Rohini) ಇದೀಗ ಬೀದಿಗೆ ಬಂದಿದ್ದು, ಈ ಸಂಬಂಧ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನ ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ.
ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಅಧಿಕಾರಿಗಳಿಬ್ಬರ ಬಹಿರಂಗ ಜಗಳದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಸರಕಾರ, ಇಬ್ಬರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತ್ತು. ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ರಾಜ್ಯ ಸರ್ಕಾರದಿಂದ ಇಬ್ಬರಿಗೂ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.
ರಾಜ್ಯ ಮುಖ್ಯ ಕಾರ್ಯದರ್ಶಿಗೆ ಐಪಿಎಸ್ ರೂಪಾ ಐಎಎಸ್ ರೋಹಿಣಿ ಸಿಂಧೂರಿಯ ಹಿಂದಿನ ಪ್ರಕರಣಗಳ ಬಗ್ಗೆ ನಿನ್ನೆ ದೂರು ದಾಖಲಿಸಿದ್ದಾರೆ.
ಕೆಲ ದಿನಗಳಿಂದ ರೋಹಿಣಿ ಕೆಲ ಪುರುಷ ಐಪಿಎಸ್ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎನ್ನಲಾದ ಹಲವು ಸ್ಕ್ರೀನ್ ಶಾಟ್ ತನ್ನ ಫೇಸ್ಬುಕಲ್ಲಿ ರೂಪಾ ಹಾಕಿದ್ದರು.