C.T Ravi | ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲ ಮಠಾಧೀಶರು, ಸಿ.ಟಿ.ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದೇನು ..? – ಸಿದ್ದರಾಮಯ್ಯ ಪ್ರಶ್ನೆ

20230223_154914
Ad Widget

Ad Widget

Ad Widget

ಬೆಂಗಳೂರು: ಮಾಂಸ ತಿಂದು ದೇವಸ್ಥಾನ , ನಾಗಬನಕ್ಕೆ ಹೋಗಿ ಪದೇ ಪದೇ ಹೇಳಿಕೆ ಬದಲಾಯಿಸಿ ಪೇಚಿಗೆ ಸಿಲುಕಿದ ಸಿಟಿ ರವಿ (C.T Ravi) ಬಗ್ಗೆ ಸಿದ್ದರಾಮಯ್ಯ ಮಾಧ್ಯಮದ ವಿಡಿಯೋ ಒಂದನ್ನು ಹಾಕಿ ಪೋಸ್ಟ್ ಹಾಕಿದ್ದಾರೆ. ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ಏನೂ ಎಂದು ಪ್ರಶ್ನಿಸಿದ್ದಾರೆ.

Ad Widget

ಅವರ ಫೇಸ್ಬುಕ್ ಪೋಸ್ಟ್ ಹೀಗಿದೆ : ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ.

Ad Widget

Ad Widget

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.

Ad Widget

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ.

Ad Widget

Ad Widget

Leave a Reply

Recent Posts

error: Content is protected !!
%d bloggers like this: