PFI | ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಿಎಫ್ಐ ಕಾರ್ಯಕರ್ತರಿಗೆ ತರಬೇತಿ – ಭಯೋತ್ಪಾದನ ನಿಗ್ರಹ ಕಾನೂನು ಯುಎಪಿಎ 1967 ಅಡಿಯಂತೆ ಮಿತ್ತೂರಿನ ಕಮ್ಯೂನಿಟಿ ಹಾಲ್ ನ್ನು ಸೀಝ್ ಮಾಡಿದ ಎನ್ಐಎ

Screenshot_20230223-135342_Chrome-transformed
Ad Widget

Ad Widget

Ad Widget

ಪುತ್ತೂರು: ದೇಶದಲ್ಲೇ ತಲ್ಲಣ ಸೃಷ್ಟಿಸಿದ್ದ ದಕ್ಷಿಣ ಕನ್ನಡ ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾದ (PFI) ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಯುಎಪಿಎ 1967 ಕಾನೂನಿನಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿದೆ.

Ad Widget

ಇಡಿದು ಗ್ರಾಮದ ಮಿತ್ತೂರಿನ 0.20 ವಿಸ್ತೀರ್ಣದ ಜಾಗದಲ್ಲಿ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಫ್ರೀಡಂ ಕಮ್ಯೂನಿಟಿ ಹಾಲ್ ಅಥವಾ ಮಿತ್ತೂರು ಕಮ್ಯೂನಿಟಿ ಹಾಲ್ ಎಂಬ ಹೆಸರಿನಲ್ಲಿ ಸಭಾಭವನವನ್ನು ನಿರ್ಮಿಸಿ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡುವುದರೊಂದಿಗೆ ತನ್ನ ಗುಪ್ತ ಯೋಜನೆಗಳಿಗೆ ಸಹಕಾರಿಯಾಗುವಂತೆ ಇದನ್ನು ಬಳಸಿಕೊಳ್ಳುತ್ತಿತ್ತು.

Ad Widget

Ad Widget

ಭಯೋತ್ಪಾದನಾ ಕೃತ್ಯಗಳಿಗೆ ಸಹಕಾರಿಯಾಗುವಂತೆ ಕಾನೂನುಬಾಹಿರವಾಗಿ ತನ್ನ ಕಾರ್ಯಪಡೆಗೆ ಇಲ್ಲಿ ಶಸ್ತ್ರ ತರಬೇತಿ ನೀಡುವುದು ತನಿಖೆಯ ವೇಳೆ ದೃಢಪಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಯುಎ (ಪಿ) ಸೆಕ್ಷನ್ 1967 ಕಾನೂನಿನನ್ವಯ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮಹಾನಿರ್ದೇಶಕರ ಸೂಚನೆ ಮತ್ತು ಆದೇಶದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಬೆಂಗಳೂರು ಕಚೇರಿಯ ಮುಖ್ಯ ತನಿಖಾಧಿಕಾರಿ ಎಂ. ಷಣ್ಮುಗಂ ಫ್ರೀಡಂ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಎಂದು ಕರೆಯಲ್ಪಡುವ ಪಾಪ್ಯುಲರ್ ಫ್ರೆಂಟ್ ಅಫ್ ಇಂಡಿಯಾ ಫ್ರೀಡಂ ಕಮ್ಯೂನಿಟಿ ಹಾಲ್ ಅಥವಾ ಮಿತ್ತೂರು ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿದೆ.

Ad Widget

ಇದರನ್ವಯ ಈ ಭೂಮಿ, ಕಟ್ಟಡವನ್ನು ಪರಭಾರೆ ಮಾಡುವುದಾಗಲಿ, ಬಾಡಿಗೆಗೆ ನೀಡುವುದಾಗಲಿ, ಯಾವುದೇ ಬದಲಾವಣೆ ಮಾಡುವುದಾಗಲಿ, ಬಳಸಿಕೊಳ್ಳುವುದಾಗಲೀ ಮಾಡುವುದನ್ನು ಸಂಪೂರ್ಣವಾಗಿ ಎನ್‌ಐಎ ನಿಷೇಧಿಸಿ, ವಶಕ್ಕೆ ಪಡೆದಿರುವ ಕುರಿತು ಫೆ.23ರಂದು ಆದೇಶ ಜಾರಿಗೊಳಿಸಿದೆ.

Ad Widget

Ad Widget

NIA ಅಥವಾ ಗೊತ್ತುಪಡಿಸಿದ ಪ್ರಾಧಿಕಾರದ ಪೂರ್ವಾನುಮತಿ ಹೊರತುಪಡಿಸಿ ಯಾವುದೇ ರೀತಿಯಲ್ಲಿ ಹೇಳಲಾದ ಆಸ್ತಿಯನ್ನು ವರ್ಗಾಯಿಸಲು, ಗುತ್ತಿಗೆಗೆ, ವಿಲೇವಾರಿ ಮಾಡಲು, ಅದರ ಸ್ವರೂಪವನ್ನು ಬದಲಾಯಿಸಲು ಅಥವಾ ವ್ಯವಹರಿಸಲು ಯಾರಿಗೂ ಅವಕಾಶವಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ.

ಇದರ ಪ್ರತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ವಿಟ್ಲ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅವರಿಗೆ ಕಳುಹಿಸಿಕೊಡಲಾಗಿದೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: