Heart Attack | ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು : ಆತಂಕಕ್ಕೆ ಕಾರಣವಾದ ಯುವ ಸಮುದಾಯದವರ ಹೃದಯಾಘಾತ

InShot_20230226_152048926
Ad Widget

Ad Widget

Ad Widget

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ (Heart Attack) ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ (ಫೆ. 25ರಂದು) ನಡೆದಿರುವುದಾಗಿ ವರದಿಯಾಗಿದೆ.

Ad Widget

ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.

Ad Widget

Ad Widget

ಫೆ.25ರ ಸಂಜೆ ಎಂದಿನಂತೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸಂತೋಷ್ ಇಲೆಕ್ಟ್ರಿಷಿಯನ್ ಕೆಲಸ ನಡೆಸುತ್ತಿದ್ದು, ಇವರಿಗೆ ಕಳೆದ 5 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

Ad Widget

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget

Ad Widget

Leave a Reply

Recent Posts

error: Content is protected !!
%d bloggers like this: