Agni Path Scheme : ಅಗ್ನಿಪಥ ಯೋಜನೆ ಸರಿಯಾಗಿದೆ- ಅದರಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ : ದಿಲ್ಲಿ ಹೈಕೋರ್ಟು

WhatsApp Image 2023-02-27 at 17.45.32
Ad Widget

Ad Widget

Ad Widget

Agni Path Scheme ನವದೆಹಲಿ:  ಭಾರತೀಯ ಸೇನೆಗೆ ಅಗ್ನಿವೀರರನ್ನು (Agniveer) ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ಸರಿಯಾಗಿದೆ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ದೇಶದ ಹಿತದೃಷ್ಟಿ ಮತ್ತು ಸಶಸ್ತ್ರ ಪಡೆಯನ್ನು ಬಲಪಡಿಸುವ ಉದ್ದೇಶದಿಂದ ಯೋಜನೆ ಜಾರಿಗ ತರಲಾಗಿದೆ ಎಂದು ಹೈಕೋರ್ಟು ಅಭಿಪ್ರಾಯ ವ್ಯಕ್ತಪಡಿಸಿದೆ.

Ad Widget

ಭಾರತೀಯ ಸೇನಾ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಜೂನ್ 14, 2022ರಿಂದ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿತ್ತು. ಇದಕ್ಕೆ ಒಂದು ವರ್ಗದಿಂದ ಭಾರೀ ಬೆಂಬಲ ವ್ಯಕ್ತವಾದರೇ, ಇನ್ನೊಂದು ವರ್ಗದಿಂದ ಅಷ್ಟೇ ವ್ಯಾಪಕ ವಿರೋಧವು ವ್ಯಕ್ತವಾಗಿತ್ತು. ಕೆಲವು ರಾಜ್ಯಗಳಲ್ಲಿ ಈ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಹಿಂಸಾಚಾರಗಳು ನಡೆದಿದ್ದವು. ಇದರಿಂದ ಆಪಾರ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಉಂಟಾಗಿತ್ತು.

Ad Widget

Ad Widget

ಈ ಯೋಜನೆಯನ್ನು ವಿರೋಧಿಸಿ ಹಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಪೈಕಿ ಅರ್ಜಿಯೊಂದರ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟಿನ  ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು, ಈ  ಯೋಜನೆಯ ವಿಚಾರವಾಗಿ ಮಧ್ಯಪ್ರವೇಶಿಸುವ ಅಗತ್ಯ ಇಲ್ಲ ಎಂದು ತಿಳಿಸಿದೆ.   ಕಳೆದ ವರ್ಷ ಡಿಸೆಂಬರ್ 15ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

Ad Widget

ಈ ಅಗ್ನಿಪಥ್‌ ಯೋಜನೆಯ  ನಿಯಮಗಳ ಪ್ರಕಾರ, ಹದಿನೇಳುವರೆ ವರ್ಷದಿಂದ 21 ವರ್ಷ ವಯಸ್ಸಿನವರು ಅಗ್ನಿಪಥ ಯೋಜನೆಯಡಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅವರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಯೋಜನೆಯಡಿ ನೇಮಕವಾದವರಲ್ಲಿ ಶೇಕಡ 25ರಷ್ಟು ಜನರನ್ನು ಮಾತ್ತ ಪರ್ಮನೆಂಟ್ ಮಾಡಿಕೊಳ್ಳಲಾಗುತ್ತದೆ ಎಂಬ ನಿಯಮವಿದೆ. ಮುಂದಿನ ಎರಡು ವರ್ಷಗಳ ಅವಧಿಗೆ ಸರ್ಕಾರವು ನೇಮಕಾತಿಯ ಗರಿಷ್ಠ ವಯೋಮಿತಿಯನ್ನು 23 ವರ್ಷಕ್ಕೆ ಹೆಚ್ಚಿಸಿತ್ತು.

Ad Widget

Ad Widget

Leave a Reply

Recent Posts

error: Content is protected !!
%d bloggers like this: