ಬೆಂಗಳೂರು (ಫೆ.28): ಮಾರ್ಚ್ 4 ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೇ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao ) ಅವರು ಎಎಪಿಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಪೊಲೀಸ್ ಇಲಾಖೆಯಿಂದ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ(AAP) ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ (Retired IPS officer) ಭಾಸ್ಕರ್ ರಾವ್ (Bhaskar rao) ಅವರು ಇಂದು ಅಧಿಕೃತವಾಗಿ ಬಿಜೆಪಿ(BJP)ಗೆ ಸೇರ್ಪಡೆಗೊಳ್ಳಲಿದ್ದಾರೆ.
ಇಂದು ಬಿಜೆಪಿ ಕಚೇರಿ ಜಗನ್ನಾಥ ಭವನ(BJP office Jagannath Bhavan)ದಲ್ಲಿ ಕಂದಾಯ ಸಚಿವ ಆರ್ ಅಶೋಕ್(R Ashok) ಅವರನ್ನು ಭೇಟಿ ಮಾಡಿದ ಬಾಸ್ಕರ್ ರಾವ್ ಅವರು ನಂತರ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕ ಜೊತೆ ಮಾತುಕತೆ ನಡೆಸಿದರು.
ಭಾಸ್ಕರ್ ರಾವ್ ಅವರು ಎಎಪಿ ಪಕ್ಷದಿಂದ ಬಸವನಗುಡಿ ವಿಧಾನಸಭೆ ಕ್ಷೇತ್ರ(Basavanagudi assembly constituency)ದಿಂದ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ಅವರ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಅಚ್ಚರಿ ಮೂಡಿಸಿದೆ.