ಹೊಸದಿಲ್ಲಿ: ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmitha Sen) ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ತಮ್ಮ ಆರೋಗ್ಯದ ಕುರಿತು ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನುವುದನ್ನು ಅವರು ಬಹಿರಂಗಪಡಿಸಿದ್ದಾರೆ.
ಒಂದೆರಡು ದಿನಗಳ ಹಿಂದೆ ಅವರು ಹೃದಯಾಘಾತಕ್ಕೊಳಗಾಗಿದ್ದು, ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತಮ್ಮ ಇನ್‌ಸ್ಟಾಗ್ರಾಂನಲ್ಲಿ ಅವರು “ನಿಮ್ಮ ಹೃದಯವನ್ನು ಸಂತೋಷ ಮತ್ತು ಧೈರ್ಯದಿಂದ ಇಟ್ಟುಕೊಳ್ಳಿ. ಅದು ನಿಮ್ಮ ಅಗತ್ಯದ ಸಂದರ್ಭದಲ್ಲಿ ನಿಮ್ಮೊಂದಿಗೆ ನಿಲ್ಲುತ್ತದೆ ಎಂದು ನನ್ನ ತಂದೆ ಹೇಳಿದ್ದರು. ನನಗೆ ಒಂದೆರಡು ದಿನಗಳ ಹಿಂದೆ ಹೃದಯಾಘಾತವಾಯಿತು.
ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಸ್ಟೆಂಟ್ ಅಳವಡಿಸಲಾಗಿದೆ. ವೈದ್ಯರು ನಿಮಗೆ ವಿಶಾಲ ಹೃದಯವಿದೆ ಎಂದು ಹೇಳಿದ್ದಾರೆ. ಎಲ್ಲವೂ ಚೆನ್ನಾಗಿದೆ ಮತ್ತೆ ನಾನು ಜೀವಿಸಲು ಸಿದ್ಧಳಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.