Hindu Mahasabha | ರಾಜ್ಯದ 224 ಕ್ಷೇತ್ರಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಸ್ಪರ್ಧೆ : ಪತ್ರಿಕಾಗೋಷ್ಠಿಯಲ್ಲಿ ಘೋಷಣೆ

FB_IMG_1677727434652
Ad Widget

Ad Widget

Ad Widget

ಬೆಂಗಳೂರು: ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ (Hindu Mahasabha) ಅಭ್ಯರ್ಥಿಗಳು ಸ್ಪರ್ಧಿಸಲಿದ್ದು. ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಹಾಸಭಾದ ಉಪಾಧ್ಯಕ್ಷ ಭಾಸ್ಕರ್ ಪೂಜಾರಿ ತಿಳಿಸಿದ್ದಾರೆ.

Ad Widget

ಬೆಂಗಳೂರು ಪ್ರೆಸ್’ಕ್ಲಬ್’ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಹಿಂದೂ ಮಹಾ ಸಭಾ ರಾಷ್ಟ್ರೀಯ ಪಕ್ಷವಾಗಿದ್ದು, ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಇರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿಸಲಾಗುವುದು. ಅದೇ ರೀತಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿಯೂ ನಮ್ಮ ಅಭ್ಯರ್ಥಿಗಳನ್ನು ಕಣಕಿಳಿಸುವುದಾಗಿ ಇದಕ್ಕೆ ಬೇಕಾದ ಎಲ್ಲ ಕಾರ್ಯವೈಖರಿಯನ್ನು ರಚಿಸಿಕೊಂಡಿರುವುದಾಗಿ ತಿಳಿಸಿದರು.

Ad Widget

Ad Widget

ಹಿಂದೂ ಮಹಾಸಭಾದ ಕೆಲವು ಪದಾಧಿಕಾರಿಗಳು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನೆಂದು ಸ್ವಯಂ ಘೋಷಣೆ ಮಾಡಿಕೊಂಡು ಹಿಂದೂ ವಿರೋಧಿ, ಭ್ರಷ್ಟಾಚಾರ ವಿರೋಧಿ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಪಕ್ಷಕ್ಕೆ ಯಾವುದೇ ಚ್ಯುತಿ ಬಾರದಂತೆ ನೋಡಿಕೊಳ್ಳುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಮನೋಜ್ ಹಾನಗಲ್ ಅವರು ಕಾನೂನು ಹೋರಾಟ ನಡೆಸಿ ನ್ಯಾಯಾಲಯವು ಯಾವುದೇ ರೀತಿಯಾದ ಪಕ್ಷ ಸಂಘಟನೆ ಕಾರ್ಯಕ್ರಮ ಮುಂದುವರೆಸಬಾರದೆಂದು ಮಧ್ಯಂತರ ಆದೇಶ ನೀಡಿದೆ ಎಂದು ತಿಳಿಸಿದರು.

Ad Widget

ಬೆಂಗಳೂರು ಜಿಲ್ಲಾಧ್ಯಕ್ಷ ಶಶಿಕಾಂತ ಪೂಜಾರಿ, ಬೆಂಗಳೂರು ನಗರ ಜಿಲ್ಲೆಯ ಉಪಾಧ್ಯಕ್ಷ ಹರೀಶ್, ಯುವ ಘಟಕ ಅಧ್ಯಕ್ಷ ಎಂ.ನಾಗರಾಜ್ ಮತ್ತಿತರರು ಹಾಜರಿದ್ದರು

Ad Widget

Ad Widget

Leave a Reply

Recent Posts

error: Content is protected !!
%d bloggers like this: