Student Sucide : ಕಾರ್ಕಳ (Karkala) : ಅನಾರೋಗ್ಯದಿಂದ ಮನನೊಂದು ಕಾರ್ಕಳದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ( college student) ಹಾಸ್ಟೆಲ್ ನ ಕೊಠಡಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ (Sucide) ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕುಂದಾಪುರದ ಕರಾವಳಿ ಶೀರೂರು ನಿವಾಸಿ ಸೀಮಾ ಆತ್ಮಹತ್ಯೆ ಮಾಡಿಕೊಂಡವರು.
ವಿದ್ಯಾಭ್ಯಾಸದ ಸಲುವಾಗಿ ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸಮಾಡಿಕೊಂಡಿದ್ದ ಸೀಮಾ ಅವರು ನರ ಹಾಗೂ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದಿದ್ದ ಅವರು 4-5 ತಿಂಗಳ ಹಿಂದೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಫೆ.2 ರಂದು ಮಧ್ಯಾಹ್ನದಿಂದ ಸಂಜೆಯ ನಡುವಿನ ಅವಧಿಯಲ್ಲಿ ಹಾಸ್ಟೆಲ್ ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಾಯಿ ಶೀಲಾವತಿ ಶೆಡ್ಡಿ ಅವರು ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.