Connect with us

ಬೆಂಗಳೂರು

Madal Virupakshappa | ಮಾಡಾಳ್ ಜಾಮೀನು ಅರ್ಜಿ ಒಂದೇ ದಿನದಲ್ಲಿ ವಿಚಾರಣೆ : ವಕೀಲರ ಸಂಘ ಖಂಡನೆ – ಜನಸಾಮಾನ್ಯರಿಗೂ ಇದೇ ನಿಯಮ ಜಾರಿಯಾಗಲಿ, ಬಾಕಿ ಇರುವ ಪ್ರಕರಣ ಒಂದೇ ದಿನದಲ್ಲಿ ಇತ್ಯರ್ಥವಾಗಲಿ ಎಂದು ಒತ್ತಾಯಿಸಿ ಸಿಜೆಐ ಗಳಿಗೆ ಪತ್ರ

Ad Widget

Ad Widget

Ad Widget

Ad Widget

ಬೆಂಗಳೂರು, ಮಾ.7: ಲಂಚ ಪ್ರಕರಣದ ಪ್ರಮುಖ ಆರೋಪಿ ಚೆನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa)ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ಬೆಂಗಳೂರು ವಕೀಲರ ಸಂಘ(ಎಎಬಿ) ತೀವ್ರ ಕಳವಳ ವ್ಯಕ್ತಪಡಿಸಿದೆ.

Ad Widget

Ad Widget

Ad Widget

ಈ ಕುರಿತಂತೆ ಮಂಗಳವಾರ ತುರ್ತು ಸಭೆ ನಡೆಸಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಮತ್ತು ಖಜಾಂಚಿ ಎಂ.ಟಿ.ಹರೀಶ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ  ಪತ್ರವೊಂದನ್ನು ಬರೆದಿದ್ದು, ಮಾ.7ರಂದು ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿರುವ ಪ್ರಕ್ರಿಯೆ ನ್ಯಾಯಾಂಗದ ಬಗ್ಗೆ ಶ್ರೀಸಾಮಾನ್ಯರಿಗಿರುವ ನಂಬಿಕೆಯನ್ನು ಹುಸಿ ಮಾಡಿದೆ ಎಂದು ತಿಳಿಸಿದೆ.

Ad Widget

ಹೈಕೋರ್ಟ್‍ನ ಸಾಮಾನ್ಯ ಪ್ರಕ್ರಿಯೆಯ ಅನುಸಾರ ಹೊಸ ಪ್ರಕರಣಗಳು ಅದರಲ್ಲೂ ನಿರೀಕ್ಷಣಾ ಜಾಮೀನು ಕೋರಿಕೆಯ ಅರ್ಜಿಗಳು ದಾಖಲಾದರೆ ಅವು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಲು ಒಂದು ವಾರ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಜನಪ್ರತಿನಿಧಿಗಳ ಹಾಗೂ ದೊಡ್ಡವರ ಪ್ರಕರಣಗಳನ್ನು ಮಾತ್ರ ಒಂದೇ ದಿನದೊಳಗೆ ಮಾನ್ಯ ಮಾಡಲಾಗುತ್ತಿದೆ  ಎಂದು ಪತ್ರದಲ್ಲಿ ವಿವರಿಸಲಾಗಿದೆ.

Ad Widget

Ad Widget
ಜಾಮೀನು ಮಂಜೂರಾದ ಕೂಡಲೇ ಮಡಾಳ್ ರೋಡ್ ಶೋ

ಮಂಗಳವಾರ ಶಾಸಕ ವಿರೂಪಾಕ್ಷಪ್ಪ ಅವರ ಅರ್ಜಿ ವಿಚಾರಣೆಯಲ್ಲಿ ಕೈಗೊಂಡ ನಿಲುವನ್ನೇ ಶ್ರೀಸಾಮಾನ್ಯರ ವಿಷಯದಲ್ಲೂ ಅನುಸರಿಸುವಂತಾಗಬೇಕು. ಅದಕ್ಕಾಗಿ ಸದ್ಯ ಹೈಕೋರ್ಟ್‍ನಲ್ಲಿ ವಿಚಾರಣೆಗೆ ಬಾಕಿ ಇರುವ ಎಲ್ಲ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಒಂದೇ ದಿನದಲ್ಲಿ ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಯಾಗುವಂತೆ ಪೋಸ್ಟ್ ಮಾಡಲು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಿಜಿಸ್ಟ್ರಾರ್ ಕಚೇರಿಗೆ ನಿರ್ದೇಶಿಸುವಂತಾಗಬೇಕು ಎಂದು ಸಂಘವು ಮನವಿ ಮಾಡಿದೆ.

Ad Widget

Ad Widget

Ad Widget

ನ್ಯಾಯಾಲಯವು ಎಲ್ಲರಿಗೂ ಸಮಾನವಾಗಿರಬೇಕು. ಉಳ್ಳವರ ಪ್ರಕರಣಗಳನ್ನು ತೀರ್ಮಾನಿಸುವಂತೆಯೇ ಬಡವರ ಅರ್ಜಿಯನ್ನೂ ಪುರಸ್ಕರಿಸುವಂತಾಗಬೇಕು ಎಂದು ಸಂಘವು ಕೋರಿದೆ. 

Click to comment

Leave a Reply

ಬೆಂಗಳೂರು

Viral Video: ಮಹಿಳಾ ಪದಾಧಿಕಾರಿಯೊಂದಿಗಿನ ಕಾಂಗ್ರೆಸ್ ಶಾಸಕನದು ಎನ್ನಲಾದ ವಾಟ್ಸ್ ಆಪ್ ಕಾಲ್ ವಿಡಿಯೋ ವೈರಲ್‌

Ad Widget

Ad Widget

Ad Widget

Ad Widget

ರಾಮನಗರ: ದೇಶಾದ್ಯಂತ ಈಗ  ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ನದೇ ಸುದ್ದಿ . ಬಹುಷ: ಒಬ್ಬನೇ ವ್ಯಕ್ತಿಯ ರಾಸಲೀಲೆಯ 2900 ವಿಡಿಯೋ ಗಳು ಸಿಕ್ಕಿರುವುದು ಜಗತ್ತಿನಲ್ಲೆ ಮೊದಲು. ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಈ ವಿಚಾರ ಸಹಜವಾಗಿಯೇ ಚುನಾವಣಾ ವಿಷಯವಾಗಿಯೂ ಬದಲಾಗಿದೆ. ವಿಪಕ್ಷ ಕಾಂಗ್ರೆಸ್‌ ಇದನ್ನು ದೇಶದಾದ್ಯಂತ ಬಿಜೆಪಿಯ ವಿರುದ್ದ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ.

Ad Widget

Ad Widget

Ad Widget

 ಇದೇ ವೇಳೆ ರಾಮನಗರ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್‌  ಹುಸೇನ್ ಮಹಿಳೆಯೊಬ್ಬರ ಜತೆಗೆ ವಾಟ್ಸ್ ಆಪ್ ಕಾಲ್ ನಲ್ಲಿ  ಇರುವ ವಿಡಿಯೋವೊಂದು  ಕಳೆದೆರಡು ದಿನಗಳಿಂದ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ಸಾಲ್ ಹುಸೇನ್ ಅವರು ಕಾಂಗ್ರೆಸ್ ಪದಾಧಿಕಾರಿ ಎನ್ನಲಾದ ಮಹಿಳೆಯೊಬ್ಬರ ಜತೆಗೆ ವಾಟ್ಸಾಪ್‌ ವಿಡಿಯೋ ಕಾಲ್‌ ನಲ್ಲಿ ಮಾತನಾಡಿದ್ದಾರೆ ಎನ್ನಲಾದ  2 ನಿಮಿಷ 27 ಸೆಕೆಂಡ್‌ನ ವಿಡಿಯೋ ಇದಾಗಿದೆ.

Ad Widget

 ಈ ವಿಡಿಯೋವನ್ನು ಸ್ಟೀನ್ ರೆಕಾರ್ಡರ್ ಮೂಲಕ ರೆಕಾರ್ಡ್ ಮಾಡಲಾಗಿದ್ದು, ಸಂಭಾಷಣೆ ಕೇಳಿಸುವುದಿಲ್ಲ. ಅದರೂ ವಿಡಿಯೋ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಈ   ವಿಡಿಯೋದಲ್ಲಿ ಇರುವ ಮಹಿಳೆ ಕಾಂಗ್ರೆಸ್ ಪಕ್ಷದ ಜಿಲ್ಲೆಯ ಹಿರಿಯ ನಾಯಕರೊಟ್ಟಿಗೆ ಫೋಟೋ ತೆಗೆಸಿಕೊಂಡಿರುವುದು ಸಹ ಚರ್ಚೆಗೆ ಕಾರಣವಾಗಿದೆ. ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ.

Ad Widget

Ad Widget

 ಒಂದೂವರೆ ವರ್ಷ ಹಿಂದಿನದು

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನನ್ನದೇ ಎಂದು ಒಪ್ಪಿಕೊಂಡಿರುವ ಶಾಸಕ ಇಕ್ಬಾಲ್‌  ಹುಸೇನ್, ಯಾರದ್ದೋ ಕೋಪವನ್ನು ತೀರಿಸಿಕೊಳ್ಳಲು ನನ್ನನ್ನು ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದ್ದಾರೆ. ಸಮಸ್ಯೆಗಳನ್ನು ಹೇಳಿಕೊಳ್ಳಲು ಹಲವಾರು ಮಂದಿ ಕರೆ ಮಾಡುತ್ತಾರೆ ವಿಡಿಯೋ ಕಾಲ್ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕರೆ ಸುಮಾರು ಒಂದೂವರೆ ವರ್ಷ ಹಿಂದಿನದು ಎಂದ ಇಕ್ಬಾಲ್‌  ಹುಸೇನ್, ಹೀಗೆ ಕಾಲ್ ರೆಕಾರ್ಡ್ ಮಾಡಿಕೊಂಡು ಈಗ ನನ್ನ ತೇಜೋವದೆ ಮಾಡಲಾಗುತ್ತಿದೆ. ಇದು ನನಗೆ ಬೇಸರ ತರಿಸಿದೆ  ಎಂದಿದ್ದಾರೆ.

Continue Reading

ಕ್ರೀಡೆ

T20 World Cup: ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ಕೆ ಎಲ್ ರಾಹುಲ್ ಗೆ ಕೋಖ್

Ad Widget

Ad Widget

Ad Widget

Ad Widget

ಬೆಂಗಳೂರು: ಮುಂಬರುವ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ. ಐಸಿಸಿ ಪುರುಷರ ಟಿ 20 ವಿಶ್ವಕಪ್ ನ ಒಂಬತ್ತನೇ ಆವೃತ್ತಿಯು 2024 ರ ಜೂನ್ 1 ರಿಂದ 29 ರವರೆಗೆ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ.

Ad Widget

Ad Widget

Ad Widget

ಜೂನ್ 2 ರ ಭಾನುವಾರ ಟೆಕ್ಸಾಸ್ ನ ಗ್ರ್ಯಾಂಡ್ ಪ್ರೈರಿಯಲ್ಲಿ ಯುಎಸ್ಎ ಮತ್ತು ಕೆನಡಾ ನಡುವಿನ ಪಂದ್ಯಾವಳಿಯ ಆರಂಭಿಕ ಪಂದ್ಯದೊಂದಿಗೆ ಪ್ರಾರಂಭವಾಗಿ ಜೂನ್ 29 ರ ಶನಿವಾರ ಬಾರ್ಬಡೋಸ್ ನ ಬ್ರಿಡ್ಜ್ಟೌ ಟೌನ್ ನಲ್ಲಿ ಫೈನಲ್ ನೊಂದಿಗೆ ಕೊನೆಗೊಳ್ಳುತ್ತದೆ.

Ad Widget

ಪ್ರಕಟಿತ ತಂಡದಲ್ಲಿ ಕನ್ನಡಿಗರಿಗೆ ಸ್ಥಾನ ಲಭಿಸಿಲ್ಲ.
ಬಹು ನಿರೀಕ್ಷಿತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ ಆಗಿತ್ತು. ಈ ಪ್ರಶ್ನೆಗೆ ಬಿಸಿಸಿಐ ಆಯ್ಕೆ ಸಮಿತಿ ಉತ್ತರ ನೀಡಿದ್ದು, ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಇತ್ತೀಚೆಗೆ ನಡೆದ ಐಸಿಸಿ ವಿಶ್ವಕಪ್‌ ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕೆ ಎಲ್‌ ರಾಹುಲ್‌ಗ ೆಕೋಖ್ ನೀಡಲಾಗಿದೆ

Ad Widget

Ad Widget

ರಿಷಭ್ ಬಹಳ ದಿನಗಳ ನಂತರ ಟೀಂ ಇಂಡಿಯಾಗೆ ಮರಳಿದ್ದಾರೆ. ಕಾರು ಅಪಘಾತವಾದಾಗಿನಿಂದ ಅವರು ಮೈದಾನದಿಂದ ದೂರವಿದ್ದರು. ಆದರೆ ಅವರು ಐಪಿಎಲ್ ಮೂಲಕ ಮೈದಾನಕ್ಕೆ ಮರಳಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ತಾವು ಟಿ20 ವಿಶ್ವಕಪ್ ಆಡಲು ಸಿದ್ಧರಾಗಿರುವುದಾಗಿ ಪ್ರದರ್ಶನದ ಮೂಲಕ ತಿಳಿಸಿದ್ದರು.

Ad Widget

Ad Widget

Ad Widget

ಭಾರತ ತಂಡ ಇಂತಿದೆ:

  1. ರೋಹಿತ್ ಶರ್ಮಾ (ನಾಯಕ)
  2. ಯಶಸ್ವಿ ಜೈಸ್ವಾಲ್
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ರಿಷಭ್ ಪಂತ್ (ವಿಕೆಟ್ ಕೀಪರ್)
  6. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  7. ಹಾರ್ದಿಕ್ ಪಾಂಡ್ಯ (ಉಪನಾಯಕ)
  8. ಶಿವಂ ದುಬೆ
  9. ರವೀಂದ್ರ ಜಡೇಜ
  10. ಅಕ್ಷರ್ ಪಟೇಲ್
  11. ಕುಲದೀಪ್ ಯಾದವ್
  12. ಯಜುವೇಂದ್ರ ಚಾಹಲ್
  13. ಆರ್ಶದೀಪ್ ಸಿಂಗ್
  14. ಜಸ್ಪ್ರೀತ್ ಬೂಮ್ರಾ
  15. ಮೊಹಮ್ಮದ್ ಸಿರಾಜ್

  16. ಮೀಸಲು ಆಟಗಾರರು:
    ಶುಭಮನ್ ಗಿಲ್, ಖಲೀಲ್ ಅಹ್ಮದ್, ರಿಂಕು ಸಿಂಗ್ ಮತ್ತು ಆವೇಶ್ ಖಾನ್.

ಗ್ರೂಪ್ ಎ: ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್ಎ
ಬಿ ಗುಂಪು: ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್
ಸಿ ಗುಂಪು: ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ, ಉಗಾಂಡಾ, ಪಪುವಾ ನ್ಯೂಗಿನಿಯಾ
ಗ್ರೂಪ್ ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ನೇಪಾಳ

Continue Reading

ಉದ್ಯೋಗ

Online applications-ಮೇ 2ರಿಂದ ಆನ್‌ಲೈನ್‌ ಮೂಲಕ ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ

Ad Widget

Ad Widget

Ad Widget

Ad Widget

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

Ad Widget

Ad Widget

Ad Widget

ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 1.

Ad Widget

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

Ad Widget

Ad Widget

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ :
ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.
ಗಮನಿಸಿ ಮೇ 2ರ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading