ಮಂಗಳೂರು : ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಲು ಮಂಗಳೂರಿಗೆ ಆಗಮಿಸದ್ದ ಮುಖ್ಯಮಂತ್ರಿಗಳು ಏರ್ಪೋರ್ಟಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ.
ಹಿರಿಯರಿಗೆ ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂದರು.
ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ವಿಚಾರವಾಗಿ ಮಾತನಾಡಿದ ಅವರು, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸುವ ಕ್ರಮ ಕೈಗೊಳ್ಳಲಾಗಿದೆ. ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿ ಜೊತೆ ಸಭೆಯನ್ನು ಮಾಡಿದ್ದೇವೆ. ಸಾಂಪ್ರದಾಯಿಕ ಕಾರಣದಿಂದ ಅಲ್ಲಲ್ಲಿ ಬೆಂಕಿ ಬೀಳುತ್ತಿದೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ.
ಅರಣ್ಯ ಇಲಾಖೆಗೆ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.