Ad Widget

Congress Ticket | ಕಾಂಗ್ರೆಸ್ ನ ಕೇಂದ್ರ ಚುನಾವಣೆ ಸಮಿತಿ ಸಭೆ : ಮೊದಲ ಪಟ್ಟಿಯ 120 ಹೆಸರು ಬಿಡುಗಡೆಗೆ ಕ್ಷಣಗಣನೆ

IMG-20230317-WA0036
Ad Widget

Ad Widget

Ad Widget

ಹೊಸದಿಲ್ಲಿ: ಕರ್ನಾಟಕ ರಾಜ್ಯ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ (Congress Ticket) ಅಂತಿಮಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಭಾಗವಹಿಸಿದ್ದಾರೆ.

Ad Widget

Ad Widget

Ad Widget

Ad Widget

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ, ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಎಂಬಿ ಪಾಟೀಲ್, ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದಾರೆ.

Ad Widget

Ad Widget

Ad Widget

Ad Widget

ಸ್ಕ್ರೀನಿಂಗ್ ಕಮಿಟಿ ಚರ್ಚೆಯ ಬಳಿಕ ಇದೀಗ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಟಿಕೆಟ್ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಸಭೆಯಲ್ಲಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಬಹುತೇಕ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ.

ಮೂಲಗಳ ಪ್ರಕಾರ 120 ಅಭ್ಯರ್ಥಿಗಳ ಹೆಸರುಗಳನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಉಳಿದ ಹೆಸರುಗಳನ್ನು ಎರಡನೇ ಹಂತದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಗಳು ಕೂಡಾ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

Ad Widget

Ad Widget

ಕೆಲವು ಕ್ಷೇತ್ರಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳ ಇರುವ ಕಾರಣದಿಂದಾಗಿ ಟಿಕೆಟ್ ಘೋಷಣೆ ಪ್ರಕ್ರಿಯೆ ಜಟಿಲಗೊಂಡಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಚರ್ಚೆ ನಡೆಯಲಿದೆ. ಟಿಕೆಟ್‌ಗಾಗಿ ಸಮುದಾಯವಾರು ಬೇಡಿಕೆಗಳು ಕೂಡಾ ಇದ್ದು, ಈ ವಿಚಾರವಾಗಿಯೂ ಅಳೆದು ತೂಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆ ನಡೆದ ಬಳಿಕ ಬಹುತೇಕ 20ನೇ ತಾರೀಕು ಅಥವಾ ರಾಹುಲ್ ಗಾಂಧಿ ರಾಜ್ಯ ಪ್ರವಾಸದ ನಂತರದಲ್ಲಿ ಟಿಕೆಟ್ ಘೋಷಣೆ ಆಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಟಿಕೆಟ್ ಘೋಷಣೆ ಮಾಡಿದರೆ ಬಂಡಾಯದ ಬಿಸಿ ಏರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮುಗಿದ ಬೆನ್ನಲ್ಲೇ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: