Rubber Taping | ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದೆರಗಿದ ಸಾವು..! : ಕಾಲು ಜಾರಿ ಬಿದ್ದಾಗ ಎದೆಗೆ ಕತ್ತಿ ನುಗ್ಗಿ ಎಡಮಂಗಲದಲ್ಲಿ ಮಹಿಳೆ ಬಲಿ

InShot_20230317_184535277
Ad Widget

Ad Widget

Ad Widget

ಬೆಳ್ಳಾರೆ : ರಬ್ಬರ್ ಟ್ಯಾಪಿಂಗ್ (Rubber Taping) ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ.

Ad Widget

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(32 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು.

Ad Widget

Ad Widget

Ad Widget

ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ ಕೈಯಲ್ಲಿದ್ದ ಹರಿತವಾದ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿದೆ. ಕತ್ತಿ ನುಗ್ಗಿದ ರಭಸಕ್ಕೆ ಕತ್ತಿಯ ಕೈ ಹಿಡಿಯುವ ಜಾಗ ತುಂಡಾಗಿದೆ.

Ad Widget

ಗೀತಾ ಅವರು ಕೂಗಿದಾಗ ಗಂಡ ಓಡಿ ಬಂದಿದ್ದು ಕೈ ಭಾಷೆಯಲ್ಲೇ ಕತ್ತಿ ನುಗ್ಗಿದ ಜಾಗ ತೋರಿಸಿದರು ಎನ್ನಲಾಗಿದೆ. ಗಂಡ ಕತ್ತಿಯನ್ನು ಎಳೆದು ತೆಗೆದಾಗ ಗೀತಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Ad Widget

Ad Widget

ಮೃತ ಗೀತಾ ಅವರಿಗೆ 8 ನೇ ತರಗತಿ ಓದುತ್ತಿರುವ ಪುತ್ರ ಹಾಗೂ ಎಲ್.ಕೆ.ಜಿ ಅಭ್ಯಾಸ ನಡೆಸುತ್ತಿದ್ದಾರೆ.

ಈ ಕುರಿತು ಮೃತರ ಗಂಡ ಶಿವರಾಮ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: