ಮಂಗಳೂರು: ಹಲವು ಜೀವ ಬಲಿ ಪಡೆದ ವೃತ್ತ ಎಂದೇ ಹಣೆಪಟ್ಟಿ ಕಟ್ಟಿಕೊಂಡಿರುವ ಮಂಗಳೂರಿನ (Mangalore) ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ತಂದೆ ಹಾಗೂ ಮಗಳು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಟಿಪ್ಟರ್ ಚಾಲಕನ ಅಜಾಗರೂಕತೆಯ ಚಾಲನೆಗೆ ರೊಚ್ಚಿಗೆದ್ದ ಸ್ಥಳದಲ್ಲಿದ್ದವರು ಚಾಲಕನಿಗೆ ಥಳಿಸಿದ್ದಾರೆ , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ಆಕ್ರೋಶಿತರ ಕೈಯಿಂದ ರಕ್ಷಿಸಿ ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಎಸಿಪಿ ಗೀತಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.