Ad Widget

Gun Deposite ಚುನಾವಣೆ ಸಂದರ್ಭ ಕೋವಿ ಡಿಪಾಸಿಟ್ ಇಡುವುದರಿಂದ ಕೃಷಿಕರಿಗೆ ವಿನಾಯತಿ  ಕೋರಿ ಡಿಸಿಗೆ ಮನವಿ  : ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಹಾಸಭೆಯಲ್ಲಿ ನಿರ್ಧಾರ

AIAGA
Ad Widget

Ad Widget

Ad Widget

ಪುತ್ತೂರು:  ಚುನಾವಣೆ ಸಂದರ್ಭ ಕೋವಿ ಡಿಪಾಸಿಟ್ ಇಡುವುದು ಕಡ್ಡಾಯವಾಗಿದ್ದು ಕೃಷಿಕರಿಗೆ ಇದರಿಂದ  ವಿನಾಯತಿ ನೀಡಬೇಕುಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದ್ದು, ಈ ಕುರಿತು  ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಮಹಾಸಭೆ ಶನಿವಾರ ಪುತ್ತೂರಿನ ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅಶೋಕ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಚುನಾವಣೆಯ ಸಂದರ್ಭ ಕೃಷಿಕರ ಕೋವಿಯನ್ನು ಡಿಪಾಸಿಟ್ ಇಡಲು ಇಲಾಖೆಗಳಿಂದ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಗೆ ನೀಡುವ ಕೋವಿಯನ್ನು ಚುನಾವಣೆಯ ಹೊತ್ತಿನಲ್ಲಿ ಡಿಪಾಸಿಟ್ ಇಡುವುದು  ಸೂಕ್ತವಲ್ಲ. ಅದೂ ಅಲ್ಲದೆ ಇಲಾಖೆಗಳಿಗೂ ಇದೊಂದು ಹೊರೆಯಾಗಿದೆ. ಕೃಷಿ ರಕ್ಷಣೆಯ ಉದ್ದೇಶದಿಂದ ಬಳಕೆಯಾಗುವ ಕೋವಿಯ ಮೂಲಕ ಚುನಾವಣೆಯ ಸಮಯದಲ್ಲಿ  ಯಾವುದೇ ಗೊಂದಂಲಗಳು ಆಗಿಲ್ಲ.  ಒಂದು ವೇಳೆ ಯಾವುದಾದರೂ ಅನಾಹುತಗಳು ನಡೆದರೆ ಅಂತಹ ವ್ಯಕ್ತಿಗಳ ಕೋವಿ ಲೈಸನ್ಸ್ ರದ್ದು ಮಾಡಲು ಅವಕಾಶವಿದೆ  ಎಂದು ಸಂಘ ಅಭಿಪ್ರಾಯ ವ್ಯಕ್ತಪಡಿಸಿತು.  

ಹಾಗಾಗಿ ಈಗ ಚುನಾವಣೆಯ ಸಮಯದಲ್ಲಿ  ಕೋವಿ ಡಿಪಾಸಿಟ್ ಕೃಷಿಕರಿಗೂ ಸಮಸ್ಯೆಯಾಗುತ್ತಿದೆ. ಈ ಕಾರಣದಿಂದ ಕೋವಿ ಡಿಪಾಸಿಟಿಗೆ ವಿನಾಯಿತಿ ನೀಡಬೇಕಲು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ನಿರ್ಧರಿಸಲಾಯಿತು.ಅಲ್ಲದೆ,  ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಹಿನ್ನಲೆಯಲ್ಲಿ ನಡೆಯುತ್ತಿರುವ  ಅಭಿಯಾನಕ್ಕೆ ಅಡಿಕೆ ಬೆಳೆಗಾರರ ಸಂಘದಿಂದಲೂ ಬೆಂಬಲ ವ್ಯಕ್ತಪಡಿಸಲಾಯಿತು.

Ad Widget

Ad Widget

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ದಯಾನಂದ ಕೋಟೆ ಹಾಗೂ ಬಿ ಟಿ ನಾರಾಯಣ ಭಟ್ ಅವರನ್ನು ಗೌರವಿಸಲಾಯಿತು. ಅಡಿಕೆ ಬೆಳೆಗಾರರ ಸಂಘದ ಪರವಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹಾಗೂ ಕೃಷಿಕ ಎ ಪಿ ಸದಾಶಿವ ಗೌರವಿಸಿದರು. ಸಂಘದ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಂಡಿಸಿದರು.ಸಂಘದ ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ ಅಡಿಕೆ ಬೆಳೆಗಾರರ ಸಂಘದ ಬೈಲಾ ತಿದ್ದುಪಡಿ ಬಗ್ಗೆ ಮಾತನಾಡಿದರು.ಮಹೇಶ್ ಪುಚ್ಚಪ್ಪಾಡಿ ಸ್ವಾಗತಿಸಿ ವಂದಿಸಿದರು.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: