ಬೆಂಗಳೂರು, ಮಾರ್ಚ್ 17; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಭರ್ಜರಿ ತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷ ಮತದಾರರಿಗೆ ಕೊಡುಗೆಗಳ ಮಹಾಪೂರವನ್ನೆ ಹರಿಸುತ್ತಿದೆ. ಉಚಿತ ವಿದ್ಯುತ್, ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಈ ಮೂರು ಘೋಷಣೆಗಳನ್ನು ಈಗಾಗಲೇ ಘೋಷಿಸಿರುವ ಸರಕಾರ ಯುವ ಮತದಾರರನ್ನು ಮನಸ್ಸಿನಲ್ಲಿಟ್ಟುಕೊಂಡು 4ನೇ ಗ್ಯಾರಂಟಿಯನ್ನು ಘೋಷಿಸಿದೆ.
ಸೋಮವಾರ ಬೆಳಗಾವಿಯಲ್ಲಿ ಕರ್ನಾಟಕ ಕಾಂಗ್ರೆಸ್ ಆಯೋಜಿಸಿದ ಯುವ ಕ್ರಾಂತಿ ಸಮಾವೇಶ ದಲ್ಲಿ ಪಾಲ್ಗೊಂಡ ಪಕ್ಷದ ಮುಂಚೂಣಿ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ 4ನೇ ಗ್ಯಾರಂಟಿಯಾದ ‘ಯುವನಿಧಿ’ ಘೋಷಣೆ ಮಾಡಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತಗಳನ್ನು ಸೆಳೆಯಲು ಮುಂದಾಗಿದೆ.
ಕಾಂಗ್ರೆಸ್ ಪಕ್ಷ ‘ಯುವನಿಧಿ’ ಘೋಷಣೆಯಡಿ ನಿರುದ್ಯೋಗಿ ಪದವೀಧರಿಗೆ ತಿಂಗಳಿಗೆ 3 ಸಾವಿರ ರೂಪಾಯಿಯನ್ನು ಹಾಗೂ ಡಿಪ್ಲೊಮಾ ಪದವೀಧರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳ ಕಾಲ ನೀಡಲಿದೆ. ಕಾಂಗ್ರೆಸ್ ಪಕ್ಷ ಯುವ ಸಬಲೀಕರಣಕ್ಕೆ ಈ ಮಹತ್ವದ ಯೋಜನೆಯನ್ನು ಘೋಷಿಸುತ್ತಿರುವುದಾಗಿ ತಿಳಿಸಿದೆ.
ಈ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ಆರ್ಥಿಕ ನೆರವು ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಘೋಷಿಸುತ್ತಿದ್ದೇವೆ. ಯುವ ಶಕ್ತಿಗೆ ಶಕ್ತಿ ತುಂಬಲು ಬದ್ಧವಾಗಿದ್ದೇವೆ ಎಂದು ಹೇಳಿದೆ.
ಕಾಂಗ್ರೆಸ್ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ವಿರುದ್ಧ ಸಚಿವ ಬಿಸಿ ಪಾಟೀಲ್ ಕರ್ನಾಟಕ ಕಾಂಗ್ರೆಸ್ ಈಗಾಗಲೇ 3 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದು ‘ಅನ್ನಭಾಗ್ಯ’ವಾಗಿದೆ. ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ ‘ಗೃಹ ಜ್ಯೋತಿ’ ಆಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಕೊಡುವುದು ಈ ಘೋಷಣೆಯಾಗಿದೆ. ಕಾಂಗ್ರೆಸ್ ನ ಗ್ಯಾರಂಟಿ 2 ‘ಗೃಹ ಲಕ್ಷ್ಮೀ’ ಯೋಜನೆಯಾಗಿದೆ. ಈ ಘೋಷಣೆಯಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಯಜಮಾನನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ.