ಬೆಳಗಾವಿ: ತಾಲೂಕಿನ ಹಿಂಡಲಗಾ ಜೈಲಿನಲ್ಲಿರುವ ಕೈದಿಯ ಹೆಸರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari ) ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ ಮಾಡಲಾಗಿದೆ ಎಂದು ವರದಿಯಾಗಿದೆ. ಪುತ್ತೂರು ಮೂಲದ ಕೈದಿಯ ಹೆಸರಿನಲ್ಲಿ ಕರೆ ಹೋಗಿದೆ, ಮಹಾರಾಷ್ಟ್ರ ಪೊಲೀಸರಿಂದ ಮಂಗಳೂರಿನ ಮಹಿಳೆಯ ವಿಚಾರಣೆ ನಡೆದಿದೆ.
“10 ಕೋಟಿ ರೂ. ಹಣ ನೀಡಬೇಕು. ಇಲ್ಲದಿದ್ದರೆ ನಿತಿನ್ ಗಡ್ಕರಿ ಅವರನ್ನು ಕೊಲೆ ಮಾಡುತ್ತೇನೆ” ಎಂದು ಹೇಳಿಕೊಂಡು ಬೆಳಗಾವಿಯಿಂದ ಜೈಲಿನಲ್ಲಿರುವ ಜಯೇಶ್ ಪೂಜಾರಿ ಎಂಬ ವ್ಯಕ್ತಿ 3 ಬಾರಿ ಕರೆ ಮಾಡಿದ್ದಾಗಿ ನಾಗ್ಪುರ ಡಿಸಿಪಿ ರಾಹುಲ್ ಮದಾನೆ ತಿಳಿಸಿದ್ದಾರೆ .
ಕರೆ ಬಂದ ನಂಬರ್ ಮಂಗಳೂರಿನ ಇವೆಂಟ್ ಮ್ಯಾನೆಜ್ ಮೆಂಟ್ ನಡೆಸುವ ಮಹಿಳೆಗೆ ಸಂಬಂಧಪಟ್ಟದ್ದು, ನಾವು ಆ ಮಹಿಳೆಯನ್ನು ಸಂಪರ್ಕಿಸಿ ವಿಚಾರಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಹಿಂದೆ ಒಮ್ಮೆ ಕರೆ ಮಾಡಿ 100 ಕೋಟಿ ಕೇಳಿದ್ದ , ಇದೀಗ 10 ಕೋಟಿ ಕೇಳಿದ್ದಾನೆ. ಈತ ಜೀವ ಬೆದರಿಕೆ ಹಾಕಿಲ್ಲ ಎಂದು ಡಿಸಿಪಿ ತಿಳಿಸಿದ್ದಾಗಿ ಎಎನ್ಐ ವರದಿ ಮಾಡಿದೆ.
ಈ ಬಗ್ಗೆ ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಆದರೆ, ಈ ಆರೋಪವನ್ನು ನಿರಾಕರಿಸಿರುವ ಜೈಲಿನ ಅಧಿಕಾರಿಗಳು “ಹಿಂಡಲಗಾ ಜೈಲಿನಲ್ಲಿ ತಪಾಸಣೆ ಮಾಡಲಾಗಿದೆ. ಯಾರ ಬಳಿಯೂ ಮೊಬೈಲ್ ಇಲ್ಲ. ಕರೆಯನ್ನು ಸದ್ಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಮಾಡಿಲ್ಲ” ಎಂದು ತಿಳಿಸಿದ್ದಾರೆ.
ಈ ಹಿಂದೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಕಾಂತಾ ಹೆಸರಿನಿಂದ ಜನವರಿ 14 ರಂದು ನಿತಿನ್ ಗಡ್ಕರಿ ಕಚೇರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆಗ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದ ಮಹಾರಾಷ್ಟ್ರದ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದರು. ಇದೇ ವಿಚಾರವಾಗಿ ಜೈಲಿನ ಏಳು ಸಿಬ್ಬಂದಿಗೆ ನೋಟಿಸ್ ನೀಡಲಾಗಿತ್ತು.
Maharashtra | Three calls were received at the office of Nitin Gadkari, all by one man who identified himself as Jayesh Pujari. The number was found to be that of a woman who is in Mangaluru. We also communicated with her, she works in event mgmt. We are finding out if the call… pic.twitter.com/fgNZETqmTf
— ANI (@ANI) March 21, 2023