ನವದೆಹಲಿ, ಮಾ 24 : ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ಸಿನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶಿಸಲಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
ಕಳೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಕೇರಳದಲ್ಲಿ ಪ್ರಧಾನಿಯವರ ಸರ್ ನೇಮ್ ಕುರಿತು ರಾಹುಲ್ ನೀಡಿದ ಹೇಳಿಕೆ ಅವರಿಗೆ ಮುಳುವಾಗಿದೆ. ಈ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಗುಜರಾತ್ ರಾಜ್ಯದ ಸೂರತ್ ನ ಕೋರ್ಟ್ ರಾಹುಲ್ ಅವರನ್ನು ದೋಷಿ ಎಂದು ಪರಿಗಣಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. .
ಆದರೆ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಜಾಮೀನು ಕೂಡ ದೊರೆದಿತ್ತು. ಎರಡು ಅಥವಾ ಅದಕ್ಕಿಂತ ಹೆಚ್ಚಿನ ವರ್ಷದ ಶಿಕ್ಷೆಗೆ ಒಳಗಾದರೆ ಲೋಕ ಸಭೆ ಸದಸ್ಯತ್ವವನ್ನು ಅನರ್ಹಗೊಳಿಸಬಹುದು ಎಂಬ ನಿಯಮವಿದ್ದು, ಅದರಂತೆ ಅವರನ್ನು ಇದೀಗ ಅನರ್ಹಗೊಳಿಸಲಾಗಿದೆ.