ಬೆಂಗಳೂರು, ಮಾ 24 : ರಾಜ್ಯದಲ್ಲಿ ಈ ಬಾರಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಎಲ್ಲಾ ಡಿಸಿಗಳಿಗೆ ಪತ್ರ ಬರೆದಿದೆ. ಎಲ್ಲಾ ಕಾರ್ಯಕ್ರಮ ಗಳನ್ನು ಮುಗಿಸಿ ಸಿದ್ಧತೆಗಳನ್ನು ನಡೆಸುವಂತೆ ಪತ್ರದಲ್ಲಿ ತಿಳಿಸಿದೆ.
ಚುನಾವಣಾ ದಿನಾಂಕವು ಯಾವುದೇ ಕ್ಷಣದಲ್ಲಿ ಘೋಷಣೆ ಯಾಗಬಹುದು. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದೆ.
ಮೇ 25 ರಂದು ರಾಜ್ಯ ವಿಧಾನಸಭೆಯ ಅವಧಿಯು ಮುಗಿಯಲಿದೆ. ಇದಕ್ಕೂ ಮೊದಲೇ ಚುನಾವಣಾ ಪ್ರಕ್ರಿಯೆ ನಡೆಸಿ ಹೊಸ ಅವಧಿಯ ಸರ್ಕಾರ ರಚಿಸಬೇಕಾಗಿದೆ. ಮೇ 15 ರೊಳಗೆ ಚುನಾವಣೆ ನಡೆಯಲಿದ್ದು, ಯಾವುದೇ ಕ್ಷಣದಲ್ಲಿ ಚುನಾವಣೆಯ ದಿನಾಂಕ ಘೋಷಣೆ ಇಲಾಖೆಯು ಮಾಡಲಿದೆ.
ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಮತ ಪ್ರಚಾರ ಪ್ರಕ್ರಿಯಯನ್ನು ಪ್ರಾರಂಭಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಹಲವಾರು ಕಡೆಗಳಲ್ಲಿ ಚುನಾವಣಾ ಆಯೋಗವು ಕಾರ್ಯಾಚರಣೆ ನಡೆಸಿ ಹಲವು ರೀತಿ ಪಕ್ಷಗಳು ಮತದಾರರಿಗೆ ನೀಡಲೆಂದು ಸಂಗ್ರಹಿಸಿಟಿದ್ದ ಉಡುಗೊರೆ ಹಾಗೂ ದಾಖಲೆ ರಹಿತ ನಗದನ್ನು ವಶಪಡಿಸಿಕೊಂಡಿದೆ.
ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ‘ಕರ್ನಾಟಕ ರಾಜ್ಯ ವಿಧಾನಸಭೆಗೆ ಏಪ್ರಿಲ್ ಮತ್ತು ಮೇ ತಿಂಗಳ ನಡುವೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗದಿಂದ ಈಗಿನಿಂದ ಯಾವ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಬಹುದು. ಹೀಗಾಗಿ ಕೆಲವು ಮಾಡಲೇಬೇಕಾದ ಚುನಾವಣಾ ಪೂರ್ವ ಸಿದ್ಧತೆಯನ್ನು ಕಡ್ಡಾಯವಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮಾಡಿ ಮುಗಿಸಬೇಕು’ ಎಂದು ಸೂಚಿಸಲಾಗಿದೆ.
ಅಲ್ಲದೇ, ಇದರೊಂದಿಗೆ ಚುನಾವಣಾ ನೀತಿ ಸಂಹಿತೆಯ ಮಾದರಿ ಜಾರಿ ಸ್ವರೂಪವನ್ನು ಲಗತ್ತಿಸಲಾಗಿದ್ದು, ಚುನಾವಣೆ ಘೋಷಣೆಯಾದ ತತ್‌ಕ್ಷಣದಿಂದ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ