ನವದೆಹಲಿ, ಮೇ 26 : ನೂತನ ಸಂಸತ್ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ 20 ಕ್ಕೂ ಹೆಚ್ಚಿನ ಪ್ರತಿ ಪ್ರಕ್ಷಗಳು ಭಾಗವಹಿಸಲು ಹಿಂದೇಟು ಹಾಕುತ್ತಿದ್ದಂತೆ ಉಳಿದ 3 ಪ್ರತಿಪಕ್ಷಗಳು ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಅವರಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.
“ನಾನು ಮಾಜಿ ಪ್ರಧಾನಿಯಾಗಿ ಮತ್ತು ಭಾರತದ ಪ್ರಜೆಯಾಗಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದರು. ರಾಜಕೀಯವಾಗಿ ಬಿಜೆಪಿಯನ್ನು ವಿರೋಧಿಸಲು ಹಲವು ಕಾರಣಗಳಿವೆ, ಆದರೆ ಸಂಸತ್ ಭವನದ ಉದ್ಘಾಟನೆಗೆ ರಾಜಕೀಯ ತರಲು ಇಷ್ಟಪಡುವುದಿಲ್ಲ. ಸಂಸತ್ತಿನ ಉಭಯ ಸದನಗಳ ಸದಸ್ಯನಾಗಿದ್ದು, ಸಂವಿಧಾನದ ಚೌಕಟ್ಟಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿದ್ದೇನೆ. ಎಂದರು.
ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಜೆಡಿಎಸ್ ಸಭೆ ನಡೆಸಿದ್ದು, ಸಭೆ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ತಾವು ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದರು. ನಾನು ಹೋಗಬಾರದೆಂದರೆ, ಅದೇನು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯೇ? ಹೊಸ ಸಂಸತ್ತಿನ ಕಟ್ಟಡ ದೇಶದ ಆಸ್ತಿಯಾಗಿದೆ ಎಂದರು.
ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ, ತೆರಿಗೆದಾರರ ಹಣದಿಂದ ಭವ್ಯವಾದ ಕಟ್ಟಡ ನಿರ್ಮಿಸಲಾಗಿದ್ದು, ಇದು ದೇಶಕ್ಕೆ ಸೇರಿದ್ದು, ಇದು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯಲ್ಲ. ಅದರಲ್ಲಿ ರಾಜಕೀಯವನ್ನು ತರಲು ಇಷ್ಟಪಡುವುದಿಲ್ಲ. ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ ಮತ್ತು ಅದಕ್ಕಾಗಿಯೇ ನಾನು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದೇನೆಂದು ತಿಳಿಸಿದರು.
ವೈಎಸ್ ಆರ್ ಕಾಂಗ್ರೆಸ್,ಜೆಡಿಎಸ್ ಹಾಗೂ ಬಿಜೆಡಿ ಪಾರ್ಟಿಯು ಈಗಾಗಲೇ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ. ಪ್ರಧಾನಿ ಮೋದಿ ಈ ನೂತನ ಕಟ್ಟಡವನ್ನು ಉದ್ಘಾಟನೆಯನ್ನು ಮಾಡಲಿದ್ದಾರೆ.