Ad Widget

ಬಿಜೆಪಿಯವರು ಕೀಳುಮಟ್ಟದ ರಾಜಕೀಯದ ಮೂಲಕ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಕೆಲಸವನ್ನು ಬಿಡಲಿ – ಪದ್ಮರಾಜ್ ಆರ್

IMG-20230527-WA0046
Ad Widget

Ad Widget

Ad Widget

ಮಂಗಳೂರು, ಮೇ 27 : ಪ್ರವೀಣ್ ನೆಟ್ಟಾರು ಪತ್ನಿ ನೂತನರವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಖಂಡಿತವಾಗಿಯೂ ಬದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಪರವಾಗಿ ನೂತನ ಅವರಲ್ಲಿ ಮಾತುಕತೆ ನಡೆಸಿದ್ದೇವೆ. ಕೂಡಲೇ ಅವರಿಗೆ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಕೀಳುಮಟ್ಟದ ರಾಜಕೀಯದ ಮೂಲಕ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಕೆಲಸವನ್ನು ಬಿಡಲಿ. ಇಂತಹ ಕೀಳು ರಾಜಕೀಯ ಮುಂದೆ ನಡೆಯುವುದಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ತಿಳಿಸಿದ್ದಾರೆ

Ad Widget

Ad Widget

Ad Widget

Ad Widget

Ad Widget

ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎನ್ನುವುದು ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ? ಅದೇ ರೀತಿ ನೂತನ ಅವರ ಕೆಲಸವೂ ರದ್ದಾಗಿದೆ. ಬಿಜೆಪಿಯವರಿಗೆ ನೂತನ ಕುಮಾರಿಯವರ ಮೇಲೆ ಅಷ್ಟೊಂದು ಅಭಿಮಾನ ಇರುತ್ತಿದ್ದರೆ ಈ ಮೊದಲೇ ಯಾಕೆ ಅವರಿಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಪ್ರಯತ್ನಿಸಿಲ್ಲ. ಅವರು ಇಷ್ಟು ದಿನವೂ ಮಾಡಿದ್ದೆಲ್ಲ ನಾಟಕ ಎಂದು ಇದರಿಂದ ಬಹಿರಂಗವಾಗಿದೆ ಎಂದು ಹೇಳಿದರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: