ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಅನುಕಂಪದ ಆಧಾರದಲ್ಲಿ ತಾತ್ಕಲಿಕ ಉದ್ಯೋಗಕ್ಕೆ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ (Praveen Nettar) ಅವರ ಪತ್ನಿ ನೂತನ ಕುಮಾರಿ ಅವರ ಕೆಲಸಕ್ಕೆ ಕುತ್ತು ಬಂದಿದೆ.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದ ಈ ಹಿಂದಿನ ಸರ್ಕಾರ ಮಾಡಿದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿ ಗಳನ್ನು ರದ್ದುಪಡಿಸಲಾಗಿದೆ. ಅದರಂತೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರ ವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಿ ಆದೇಶ ಹೊರಡಿಸಲಾಗಿದೆ.
2022ರ ಜುಲೈ 26ರಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು. ಅಲ್ಲದೆ, ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಮನೆ ನಿರ್ಮಿಸಿಕೊಡಲಾಗಿದ್ದು, ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾತ್ಕಾಲಿಕ ಕೆಲಸ ಕೊಡಲಾಗಿತ್ತು.
2022ರ ಸೆ.22ರಂದು ಅಂದಿನ ಸಿಎಂ ಬೊಮ್ಮಾಯಿ ಹೊರಡಿಸಿದ್ದ ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ‘ಸಿ’ ಹುದ್ದೆಗೆ ನೇಮಕ ಮಾಡಲಾಗಿತ್ತು.
ಸಹಜ ಪ್ರತಿಕ್ರಿಯೆ – ಶೀಘ್ರ ಹೊಸ ಪ್ರಕ್ರಿಯೆ ಕಳುಹಿಸುತ್ತೇವೆ :
ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರು ಗಮನಕ್ಕೆ ತಂದಿದ್ದಾರೆ. ಅವರನ್ನು ಮತ್ತೆ ಮುಂದುವರಿಸುವ ಬಗ್ಗೆ ತಕ್ಷಣವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ರವಿಕುಮಾರ್ ಜಿಲ್ಲಾಧಿಕಾರಿ, ದ.ಕ