Ad Widget

Praveen Nettar wife Govt Job : ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗ ಕಾಂಗ್ರೆಸ್ ಕಿತ್ತುಕೊಂಡಿದ್ದು ಮತ್ತೆ ಉದ್ಯೋಗ ನೀಡಬೇಕು – ಇಲ್ಲದಿದ್ದಲ್ಲಿ ಕೇಂದ್ರದ ಎನ್ಎಂಪಿಟಿಯಲ್ಲಿ ಕೆಲಸ ನೀಡಲಿದ್ದೇವೆ : ನಳಿನ್‌

WhatsApp Image 2023-05-27 at 14.03.45
Ad Widget

Ad Widget

Ad Widget

praveen Nettar wife Govt Job ಮಂಗಳೂರು: ದಿ. ಪ್ರವೀಣ್ ನೆಟ್ಟಾರ್ ( Praveen Nettar) ಪತ್ನಿಗೆ ನೀಡಿದ್ದ ಉದ್ಯೋಗವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಆಕೆಗೆ ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ (bjp State president) ನಳಿನ್ ಕುಮಾರ್ ಕಟೀಲ್ ( Nalin Kumar Kateel) ಸಿಎಂ ಸಿದ್ಧರಾಮಯ್ಯಗೆ (CM Siddaramaiah) ಮನವಿ ಮಾಡಿದ್ದಾರೆ. ಒಂದು ವೇಳೆ ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಆಕೆಗೆ ಉದ್ಯೋಗ ನೀಡಲಿದ್ದೇವೆ ಎಂದು ಅವರು ಹೇಳಿದರು.

Ad Widget

Ad Widget

Ad Widget

Ad Widget

Ad Widget

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ, ಹತ್ಯೆ ಮಾಡುತ್ತಿದೆ ಎಂದು ಅವರು ಗುರುತರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ನವರಿಗೆ ತಾಕತ್ ಇದ್ರೆ ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದೆ ಎಂದು ಆರೋಪ ಮಾಡಿದ ನಳಿನ್ ಕುಮಾರ್ ಕಟೀಲ್, ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗಿದೆ.

ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ ಎಂದು ಆರೋಪಿಸಿದರು.

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ ನಳಿನ್ ಕುಮಾರ್ ಕಟೀಲ್, ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳೊಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಮಾಡುತ್ತೇವೆ. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ ಈ ಬಗ್ಗೆ ದುಃಖ ವಿದೆ ಎಂದು ಹೇಳಿದರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: